ಮೂಡುಬಿದಿರೆ : ವಿದ್ಯಾರ್ಥಿನಿ ಆತ್ಮಹತ್ಯೆ!

Share the Article

ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಮೂಡುಬಿದಿರೆ ಖಾಸಗಿ ಕಾಲೇಜೊಂದರಲ್ಲಿ ವರದಿಯಾಗಿದೆ.

ಇಲ್ಲಿನ ನ್ಯಾಚುರೋಪತಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಹಾಸ್ಟೆಲ್‌ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸೋಮವಾರ ಸಾಯಂಕಾಲ ಮಾಡಿಕೊಂಡಿದ್ದಾಳೆ.

ಕೌಟುಂಬಿಕ ಸಮಸ್ಯೆಯಿಂದ ವಿದ್ಯಾರ್ಥಿನಿ ಬಳಲುತ್ತಿದ್ದು, ಹಾಗಾಗಿ ಇದರಿಂಲೇ ಬೇಸತ್ತು ಆತ್ಮಹತ್ಯೆಗೈದಿದ್ದಾಳೆಂದು ತಿಳಿದು ಬಂದಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply