ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಅಮಾಯಕರ ಸೆರೆ – ಎಸ್ ಡಿಪಿಐ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಹಾಗೂ ಅಮಾಯಕರನ್ನು ಬಂಧಿಸಲಾಗುತ್ತಿದೆ ಎಂದು ಆರೋಪ ಮಾಡಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ‘ನಮ್ಮ ಪಕ್ಷದ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮೂವರು ಅಮಾಯಕರನ್ನು ಎನ್‌ಐಎ ಬಂಧಿಸಿದೆ. ವಿಚಾರಣೆಗೆಂದು ಕರೆದುಕೊಂಡು ಹೋದವರನ್ನು ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗುವಂತೆ ಮಾಡಿದೆ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಎನ್‌ಐಎ ದುರುಪಯೋಗ ಮಾಡಿಕೊಳ್ಳುತ್ತಿದ್ದು, ಹಿಂಬಾಗಿಲ ಮೂಲಕ ರಣಹೇಡಿ ಕೆಲಸ ಮಾಡುತ್ತಿದೆ” ಎಂದು ಹೇಳಿದರು.

ರಾಜ್ಯ ಸರಕಾರ ಪ್ರವೀಣ್ ನೆಟ್ಟಾರು ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕಾಗಿ ಎನ್‌ಐಎ ತನಿಖೆಗೆ ನೀಡಿದೆ. ಆದರೆ ಮಸೂದ್ ಕೊಲೆ ಪ್ರಕರಣವನ್ನು ರಾಜ್ಯ ಪೊಲೀಸರೇ ತನಿಖೆ ನಡೆಸುತ್ತಿದ್ದಾರೆ. ಅಷ್ಟು ಮಾತ್ರವಲ್ಲದೇ ಸಂಘಪರಿವಾರದ ಯಾವುದೇ ಒಬ್ಬ ನಾಯಕರು ಮತ್ತು ಸಂಚು ರೂಪಿಸಿದವರನ್ನು ವಿಚಾರಣೆ ನಡೆಸಿಲ್ಲ. ಈ ಸರ್ವಾಧಿಕಾರಿ ಧೋರಣೆ ವಿರೋಧಿಸಿ ರಾಜ್ಯಾದ್ಯಂತ ಪತ್ರ ಚಳವಳಿ ನಡೆಸಿ ರಾಷ್ಟ್ರಪತಿಗಳ ಗಮನಕ್ಕೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

Leave A Reply

Your email address will not be published.