ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಬೊಮ್ಮಾಯಿ !
ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡು ಅನೇಕ ಯೋಜನೆಗಳನ್ನು ರೂಪಿಸಿರುವ ಜೊತೆಗೆ ರೈತರು ಬೆಳೆದ ಬೆಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಬಲ ಬೆಲೆಯನ್ನೂ ಕೂಡ ಘೋಷಿಸಿದೆ. ಈ ನಡುವೆ ಅಡಿಕೆ ಬೆಳೆಗಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಎಲೆಚುಕ್ಕೆ ರೋಗಕ್ಕೆ ನಷ್ಟ ಭರಿಸಲು ಪರಿಹಾರವಾಗಿ ತಕ್ಷಣ 10 ಕೋಟಿ ರೂ. ಬಿಡುಗಡೆ ಮಾಡಿರುವ ಕುರಿತು ಮಾಹಿತಿ ನೀಡಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿಯವರು ಬೈಂದೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗ ಕಾಣಿಸಿಕೊಳ್ಳುತ್ತಿರುವುದರಿಂದ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ, ಬೆಳೆಗಾರರು ಧೃತಿಗೆಡುವ ಅವಶ್ಯಕತೆ ಇಲ್ಲ. ಈ ರೋಗದ ಕುರಿತ ಅಧ್ಯಯನಕ್ಕೆ ತಜ್ಞರ ತಂಡ ನಿಯೋಜನೆ ಮಾಡಲಾಗಿದ್ದು, ಕೃಷಿ ವಿವಿ ಹಾಗೂ ಅಧ್ಯಯನ ತಂಡ ಪರಿಶೀಲನೆ ನಡೆಸುತ್ತಿದ್ದಾರೆ.
ಅಲ್ಲದೆ, ರೋಗ ಹರಡದಂತೆ ವಿಜ್ಞಾನಿಗಳು ಕೆಲವೊಂದು ಸಲಹೆ ನೀಡಿದ್ದು, ಎಲೆಚುಕ್ಕೆ ರೋಗದ ಮೂಲ ತಿಳಿದುಕೊಂಡು ಸೂಕ್ತ ಔಷಧಿ ಪತ್ತೆ ಹಚ್ಚಲಾಗುವ ಕುರಿತು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.