ಕಡಬ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಐವರಿಗೆ ಗಾಯ

Share the Article

ಕಡಬ: ಫಾರ್ಚೂನರ್ ಕಾರೊಂದು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನ.8ರಂದು ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದೆ.

ಗಾಯಾಳುಗಳನ್ನು  ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

Leave A Reply