ಕನ್ನಡ ಚಿತ್ರರಂಗದ ಹಿರಿಯ ನಟ, ತನ್ನ ಕಂಚಿನ ಕಂಠದಿಂದಲೇ ಖ್ಯಾತಿ ಪಡೆದ ನಟ ಲೋಹಿತಾಶ್ವ ವಿಧಿವಶ!

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದ್ದಾರೆ.

 

ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಟಿ.ಎಸ್. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಅವರು ಐನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿರುವ ಅವರು ಚಿತ್ರರಂಗದಲ್ಲಿ ತಮ್ಮ ಗಂಭೀರ ಧ್ವನಿಗೆ ಹೆಸರಾದವರು. ಇವರಿಗೆ ಮೂರು ಜನ ಮಕ್ಕಳು. ಇವರಲ್ಲಿ ನಟ ಶರತ್ ಲೋಹಿತಾಶ್ವ ಕನ್ನಡ ಚಿತ್ರರಂಗದಲ್ಲಿ ಜನಪ್ರಿಯ ಖಳನಟರಾಗಿ ಖ್ಯಾತಿ ಪಡೆದಿದ್ದಾರೆ.

ಲೋಹಿತಾಶ್ವ ಅವರು ನಟಿಸಿದ ಧಾರಾವಾಹಿಗಳು :
ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್
ಜಿ ವಿ ಅಯ್ಯರ್ ನಿರ್ದೇಶನದ ನಾಟ್ಯರಾಣಿ ಶಾಂತಲಾ
ಕೆ ಎಂ ಚೈತನ್ಯ ನಿರ್ದೇಶನದ ಓ ನಮೋ.
ಎಂ ಎಸ್ ಸತ್ಯು ನಿರ್ದೇಶನದ ಆಂಟಿಮ್ ರಾಜ
ಗಿರೀಶ್ ಕಾಸರವಳ್ಳಿ ನಿರ್ದೇಶನದ ಗೃಹಭಂಗ

ನಟಿಸಿದ ಸಿನಿಮಾಗಳು : ಅಭಿಮನ್ಯು, A K 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾಂಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ

Leave A Reply

Your email address will not be published.