Ration Card : ಹೊಸದಾಗಿ BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಶಾಕಿಂಗ್ ನ್ಯೂಸ್!!!

ಸರ್ಕಾರ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಆದರೆ, ರಾಜ್ಯದಲ್ಲಿ ಅನೇಕ ಕಾರಣಗಳಿಂದಾಗಿ ಈಗಾಗಲೇ ಲಕ್ಷಾಂತರ ಕಾರ್ಡ್ಗಳನ್ನು ಸರ್ಕಾರ ರದ್ದುಗೊಳಿಸಿದೆ. ಈ ನಡುವೆ ಹೊಸ ಬಿಪಿಎಲ್ ಕಾರ್ಡ್ ಗಳಿಗಾಗಿ ( BPL Ration Card ) ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆ ಕೊಂಚವೂ ಕಡಿಮೆ ಆಗಿಲ್ಲ ಎಂಬುದು ವಿಶೇಷ. ಆದರೆ, ಹೊಸ ಕಾರ್ಡ್ ಗೆ ಅರ್ಜಿ ( New Ration Card Application ) ಸಲ್ಲಿಸಿದ ಬಳಿಕ ಕಾರ್ಡ್ ವಿತರಣೆಯ ಬಗ್ಗೆ ಖಾತ್ರಿ ಇಲ್ಲವೆಂದು ಆಹಾರ ಇಲಾಖೆ ಹೇಳುತ್ತಿದೆ.

 

ರಾಜ್ಯದಲ್ಲಿ ಈವರೆಗೆ 3.11 ಲಕ್ಷ ಕುಟುಂಬಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದು, ಹೀಗೆ ಸಲ್ಲಿಕೆಯಾದಂತಹ ಕಾರ್ಡ್ ಗಳನ್ನು ಪರಿಶೀಲನೆ ನಡೆಸಿ, ಅರ್ಹರಿಗೆ ವಿತರಿಸಬೇಕಾದಂತಹ ಪಡಿತರ ವಿತರಣೆಯ ಕುರಿತಾಗಿ ಯಾವುದೇ ಒಪ್ಪಿಗೆ ಸೂಚಿಸದ ಕಾರಣ ಇನ್ನು ಕೂಡ ಪಡಿತರ ವಿತರಣೆಯಾಗದೆ ಬಾಕಿ ಉಳಿದಿದೆ.

ರಾಜ್ಯ ಸರ್ಕಾರದ ಈ ನಿರ್ಧಾರದ ಪರಿಣಾಮವಾಗಿ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕ ಅರ್ಹ ಕುಟುಂಬಗಳು ಆಹಾರ ಧಾನ್ಯವಿಲ್ಲದೇ, ಬಿಪಿಎಲ್ ಕಾರ್ಡ್ ನಿಂದ ವಂಚಿತವಾಗಿ ದಿನದೂಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದಷ್ಟೇ ಅಲ್ಲದೇ ಬಿಪಿಎಲ್ ಕಾರ್ಡ್ ಇಲ್ಲದೇ ಇರುವುದರಿಂದ ವೈದ್ಯಕೀಯ ಉಚಿತ ಚಿಕಿತ್ಸೆ ಸೌಲಭ್ಯ ಪಡೆಯಲು ಒದ್ದಾಡುವ ಸ್ಥಿತಿ ತಲೆದೋರಿದೆ.

ಪ್ರಸ್ತುತ ರಾಜ್ಯದಲ್ಲಿ 1.26 ಕೋಟಿ ಬಿಪಿಎಲ್ ಕಾರ್ಡ್ ಗಳಿದ್ದು, ಹೊಸ ಕಾರ್ಡ್ ಯಾಕೆ ವಿತರಣೆಯಾಗಿಲ್ಲ ಎಂಬುದಕ್ಕೆ ಆಹಾರ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಟಿ ರೇಜು ಅವರು ಸಬೂಬು ನೀಡಿದ್ದು, ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದಿದ್ದು, ರಾಜ್ಯ ಸರ್ಕಾರ ಅನುಮತಿ ಕೊಡದೆ ಇರುವುದರಿಂದ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ .

ಹಾಗಾಗಿ, ಹೊಸ ಕಾರ್ಡ್ ವಿತರಣೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ಆದರೆ, ಹೊಸ ಕಾರ್ಡ್ ಗಾಗಿ ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

Leave A Reply

Your email address will not be published.