ಪ್ರೌಢಶಿಕ್ಷಣ ಇಲಾಖೆ ಇನ್ಮುಂದೆ ಇರುವುದಿಲ್ಲ !
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಮರು ನಾಮಕರಣ ಮಾಡಲು ರಾಜ್ಯ ಸರ್ಕಾರವು ಆದೇಶವನ್ನು ಹೊರಡಿಸಿದೆ.
ಮಂಡಳಿ ನಿರ್ದೇಶಕರಾದ ಹೆಚ್. ಎನ್. ಗೋಪಾಲಕೃಷ್ಣ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾವಣೆ ಮಾಡಲಾಗಿದೆ.
ಕಡತ, ಮೊಹರು, ಪತ್ರ ವ್ಯವಹಾರದಲ್ಲಿಯೂ ಹೊಸ ಹೆಸರು ಬಳಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಆದೇಶವನ್ನು ಹೊರಡಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ತಿಳಿದು ಬಂದಿದೆ.