ಹೊಸ ಕಾಲೇಜು ಆರಂಭಿಸುವ ಶಿಕ್ಷಣ ಸಂಸ್ಥೆಗಳಿಗೆ, ಟ್ರಸ್ಟ್ ಗಳಿಗೆ ಗುಡ್ ನ್ಯೂಸ್!!!

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4 ರನ್ವಯ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದ್ದು, ಹಾಗಾಗಿ, ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ / ಟ್ರಸ್ಟ್‌ಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಈ ಕುರಿತು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ನಮೂನೆಯನ್ನು ದಿನಾಂಕ 07-11-2022 ರಿಂದ ದಿನಾಂಕ 06-12-2022ರ ಒಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


Ad Widget

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.pue.karnataka.gov.in ಗೆ ಭೇಟಿ ನೀಡಬೇಕು. ಅಲ್ಲಿ ನಿಗದಿತ ಲಿಂಕ್ ಆಗಿರುವ https://dupe-exam.karnataka.gov.in/newcollege2023 ರಿಂದ ಮಾಹಿತಿ ಪಡೆಯಬಹುದಾಗಿದೆ.

Ad Widget

Ad Widget

Ad Widget

ಇನ್ನೂ, 2021-22 ಮತ್ತು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಆನ್‌ಲೈನ್‌ ಮೂಲಕ ಈಗಾಗಲೇ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಮಂಜೂರು ಕೋರಿ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು / ಟ್ರಸ್ಟ್‌ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇಲ್ಲ.

ಒಂದು ವೇಳೆ ತಮ್ಮ ಅರ್ಜಿಯು ಇಲಾಖೆಯಿಂದ ತಿರಸ್ಕೃತಗೊಂಡಿದ್ದಲ್ಲಿ / ಮಾನ್ಯ ಆಗದೆ ಇದ್ದರೆ/ ಆಕ್ಷೇಪಣೆಗೊಳಿಸಿದ್ದಲ್ಲಿ ಮಾತ್ರ 2023-24ನೇ ಸಾಲಿನ ಸ್ಥಳ ಪರಿಶೀಲನೆ ಸಮಿತಿಯಲ್ಲಿಯ ವರದಿಯೊಂದಿಗೆ ತ್ವರಿತವಾಗಿ ಪ್ರಸ್ತಾವನೆಯನ್ನು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರ ಮುಖಾಂತರ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

error: Content is protected !!
Scroll to Top
%d bloggers like this: