ಕಲಾವಿದರಿಗೆ ಉತ್ತಮ ಅವಕಾಶ | ಇಂದೇ ಅರ್ಜಿ ಸಲ್ಲಿಸಿ

ಇದೀಗ ಕಲಾವಿದರಿಗೆ ಭರ್ಜರಿ ಅವಕಾಶ ಒದಗಿ ಬಂದಿದೆ. ಎಷ್ಟೋ ಜನರು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ಅವಕಾಶಕ್ಕಾಗಿ ಕಾಯುತ್ತಿರುತ್ತಾರೆ. ಅಂತಹ ಕಲಾವಿದರಿಗೆ ಒಳ್ಳೆಯ ಆಫರ್ ಬಂದೊದಗಿದೆ. ಈ ಕೂಡಲೆ ಅರ್ಜಿ ಸಲ್ಲಿಸಿ, ನಿಮ್ಮ ಕನಸನ್ನು ನನಸುಗೊಳಿಸಿ.

 

ವಿಜಯಪುರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2022-23ನೇ ಸಾಲಿನಲ್ಲಿ ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಬಗೆಗಿನ ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಿದೆ. ಹಾಗಾಗಿ ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇನ್ನೂ, ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಜಿಯ ಸಲ್ಲಿಕೆಗೆ ಯಾವುದೆಲ್ಲಾ ನಿಯಮಗಳಿವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಜಯಪುರ ಜಿಲ್ಲೆಯಿಂದ 3 ಬೀದಿ ನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು. ಆ ತಂಡದಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಾಗಿರಬೇಕು. ಹಾಗೂ ಪ್ರತೀ ಜಾನಪದ ಸಂಗೀತ ಕಲಾ ತಂಡದಲ್ಲಿ ಮೂವರು ಕಲಾವಿದರಿರಬೇಕು. ಇದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು ಎಂದು ನಿಯಮವಾಗಿದೆ .

ವಿಜಯಪುರ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲೆಯ ತಾಲೂಕು ಮತ್ತು ಆಯ್ದ ಹಳ್ಳಿಗಳಲ್ಲಿ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಕಲಾವಿದರು ಅರ್ಜಿ ಸಲ್ಲಿಸಿ, ಆಯ್ಕೆಯಾದ ಕಲಾವಿದರಿಗೆ ಸರ್ಕಾರದಿಂದ ಸಂಭಾವನೆ ನೀಡಲಾಗುವುದು.

ಆಸಕ್ತ ಅರ್ಹ ಕಲಾ ತಂಡಗಳು ನಿಗದಿತ ಅರ್ಜಿ ನಮೂನೆಯನ್ನು ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 14-11-2022ರ ಒಳಗಾಗಿ ಸಲ್ಲಿಸಬೇಕು.

ಆಸಕ್ತರು ಸಲ್ಲಿಸಬೇಕಾದ ದಾಖಲೆಗಳು ಹಾಗೂ ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ: 8660068406 ಸಂಖ್ಯೆಗೆ ಸಂಪರ್ಕಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.