Karnataka TET Exam -2022 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022ರ ‘ಕೀ ಉತ್ತರ’ ಪ್ರಕಟ

ಸಾರ್ವಜನಿಕ ಶಿಕ್ಷಣ ಇಲಾಖೆಯು (School Education Department) ದಿನಾಂಕ 06-11-2022ರಂದು ನಡೆದಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -2022ರ (Karnataka Teacher Eligibility Test-2022 KAR TET) ಕೀ ಉತ್ತರ (Key Answer) ಪ್ರಕಟಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 06-11-2022ರಂದು ನಡೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022ರ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

ಟಿಇಟಿ ಪರೀಕ್ಷೆಯ ಸರಿ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ www.schooleducation.kar.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ. ಈ ಸಂಬಂಧದ ಆಕ್ಷೇಪಣೆಗಳನ್ನು ಅಭ್ಯರ್ಥಿಗಳು ದಿನಾಂಕ 10-11 2022 ರಿಂದ 17-11-2022ರ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ.

Leave A Reply

Your email address will not be published.