ಮಹಿಳಾ ಮೆಸ್ಕಾಂ ಉದ್ಯೋಗಿ ಆತ್ಮಹತ್ಯೆ!

ಮಹಿಳಾ ಮೆಸ್ಕಾಂ ಉದ್ಯೋಗಿಯೊಬ್ಬರು ನೇಣು ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ಹಾಡಿಯಲ್ಲಿ ಈ ಘಟನೆ ನಡೆದಿದೆ.

 

ಕಲ್ಯಾ ಗ್ರಾಮದ ನಿಶಾ (23) ಆತ್ಮಹತ್ಯೆ ಮಾಡಿಕೊಂಡವರು.

ನಿಟ್ಟೆಯ ಮೆಸ್ಕಾಂನಲ್ಲಿ ನಿಶಾ ಅವರು ಉದ್ಯೋಗಿಯಾಗಿದ್ದರು. ಇವರ ಸಹೋದರ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ನಿಶಾ ಅವರು ಕೂಡ ಮಾನಸಿಕವಾಗಿ ನೊಂದುಕೊಂಡೋ ಅಥವಾ ಇನ್ನಾವುದೋ ಕಾರಣದಿಂದ ಮನನೊಂದು ನ.8 ರಂದು ಮಧ್ಯಾಹ್ನ ತನ್ನ ಮನೆಯ ಪಕ್ಕದ ಹಾದಿಯಲ್ಲಿ ನೀವು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತರ ತಂದೆ ರವಿ ಪೂಜಾರಿ ಅವರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Leave A Reply

Your email address will not be published.