ಕಾಂಗ್ರೆಸ್ ವಿಜಯ ಸಂಕಲ್ಪ ಶಿಬಿರದಲ್ಲಿ, ಕಾರ್ಯಕರ್ತರ ನಡುವೆ ಮಾರಾಮಾರಿ : ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯ

Share the Article

ಬೆಂಗಳೂರು: ದಾಸರಹಳ್ಳಿಯ ಎನ್‌ಟಿಟಿಎಫ್ ಜಿಮ್‌ಖಾನ ಕ್ಲಬ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದ, ಕಾಂಗ್ರೆಸ್ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಪಕ್ಷದ ಎರಡು ಬಣಗಳ ನಡುವೆ ತೀವ್ರ ಮಾರಾಮಾರಿ ನಡೆದಿದೆ.

ದಾಸರಹಳ್ಳಿ ಉಸ್ತುವಾರಿ ಡಾ. ನಾಗಲಕ್ಷ್ಮಿ ಚೌಧರಿ ನೇತೃತ್ವದಲ್ಲಿ ನಡೆಯುತ್ತಿದ್ದ ಶಿಬಿರಕ್ಕೆ ಕಾಂಗ್ರೆಸ್ ಮುಖಂಡ ಪಿ.ಎನ್ ಕೃಷ್ಣ ಮೂರ್ತಿಗೆ ಆಹ್ವಾನ ನೀಡಿರಲಿಲ್ಲ. ಇದರಿಂದ ಕೆರಳಿದ ಪಿಎನ್ ಕೃಷ್ಣಮೂರ್ತಿ ಬೆಂಬಲಿಗರು ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ ಗಲಾಟೆ ನಡೆಸಿದರು ಎಂಬ ಆರೋಪ ಕೇಳಿಬಂದಿದೆ. ಕೆಪಿಸಿಸಿ ಸದಸ್ಯರಾಗಿರುವ ಪಿಎನ್ ಕೃಷ್ಣಮೂರ್ತಿಯನ್ನು ಸಭೆಗೆ ಆಹ್ವಾನಿಸಿಲ್ಲ ಎಂದು ಇಪ್ಪತ್ತಕ್ಕೂ ಹೆಚ್ಚು ಬೆಂಬಲಿಗರು ಗಲಾಟೆ ನಡೆಸಿದ್ದಾರೆ ಎನ್ನಲಾಗ್ತಿದೆ.

ಈ ಗಲಾಟೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ ಕುರಿತು ವರದಿಯಾಗಿದೆ. ಈ ಪ್ರಕರಣದ ಕುರಿತು ಪೀಣ್ಯ ಪೋಲಿಸ್ ಠಾಣೆಯಲ್ಲಿ ದೂರ ದಾಖಲಾಗಿದೆ.

Leave A Reply

Your email address will not be published.