ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ರಾಜ್ಯಾದ್ಯಂತ `ಆರೋಗ್ಯ ಅಮೃತ ಅಭಿಯಾನ’ ಯೋಜನೆ ವಿಸ್ತರಣೆ

ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ಗ್ರಾಮೀಣ ಜನರ ಆರೋಗ್ಯ ಸುರಕ್ಷತೆಯ ಗ್ರಾಮಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ ಯೋಜನೆಗೆ ಶೀಘ್ರವೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಈ ಯೋಜನೆಗೆ ಅನುದಾನ ಒದಗಿಸಲಿದ್ದು, ಯೋಜನೆಗೆ ಜಿಲ್ಲಾ ಪಂಚಾಯಿತಿಗಳ ಡಿಡಿಒಗಳ ಖಾತೆಗೆ ಖಜಾನೆ-2 ತಂತ್ರಾಂಶದ ಮೂಲಕ ಅನುದಾನ ಬಿಡುಗಡೆ ಮಾಡಲಾಗುತ್ತದೆ.

ಕರ್ನಾಟಕ ಹೆಲ್ತ್ ಪ್ರಮೋಷನ್‌ ಟ್ರಸ್ಟ್ ವತಿಯಿಂದ ಕಳೆದ ವರ್ಷ ರಾಜ್ಯದ 14 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದೀಗ ಉಳಿದ 17 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಈ ಯೋಜನೆ ಮೂಲಕ ಜನರ ಆರೋಗ್ಯ ತಪಾಸಣೆ ಮಾಡಲು ಆಶಾ ಕಾರ್ಯಕರ್ತೆಯರಿಗೆ ಪೂರಕ ತರಬೇತಿ ನೀಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗೂ ಒಂದೊಂದು ಆರೋಗ್ಯ ಕಿಟ್ ಗಳನ್ನು ವಿತರಿಸಲಾಗುತ್ತದೆ. ಈ ವರ್ಷ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಹಾವೇರಿ, ಕೊಡಗು, ಕೋಲಾರ, ರಾಮನಗರ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ 3161 ಗ್ರಾಮಪಂಚಾಯಿತಿ ಯೋಜನೆಯನ್ನು ವಿಸ್ತರಣೆ ಮಾಡಲಾಗುತ್ತಿದೆ.

Leave A Reply

Your email address will not be published.