Free Coaching : KPSC, UPSC ಪರೀಕ್ಷೆಗೆ ಸರಕಾರದಿಂದ ಉಚಿತ ತರಬೇತಿ | ಹೆಚ್ಚಿನ ಮಾಹಿತಿ ಇಲ್ಲಿದೆ!
ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ತರಬೇತಿ ನೀಡುವ ಯೋಜನೆ ರೂಪಿಸಲಾಗಿದ್ದು, ಕಲಿಕೆಯೆಯಲ್ಲಿ ಆಸಕ್ತಿಯುಳ್ಳ ಮತ್ತು ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ಆಶಯ ಹೊಂದಿರುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಿದೆ.
ಕಾರ್ಮಿಕರ ಮಕ್ಕಳಿಗೆ ನೆರವಾಗುವ ದೃಷ್ಟಿಯಿಂದ ಈ ತರಬೇತಿ ಆಯೋಜಿಸಲಾಗಿದ್ದು ಇದರಲ್ಲಿ KPSC/ UPSC ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ ಮುಂದಾಳತ್ವ ವಹಿಸಿದ್ದಾರೆ. ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ತರಬೇತಿ ನೀಡಿ ನೆರವಾಗುವ ನಿಟ್ಟಿನಲ್ಲಿ ಈ ತರಬೇತಿ ಆಯೋಜಿಸಲಾಗಿದೆ.
ಸರ್ಕಾರದಿಂದ KPSC, UPSC ಪರೀಕ್ಷೆಗೆ ಉಚಿತ ತರಬೇತಿ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಈ ತರಬೇತಿ ನೀಡಲಾಗುತ್ತದೆ. ಹಾಗಾಗಿ, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಈ ತರಬೇತಿ ಆಯೋಜಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ದಾಖಲೆಗಳು ಹೀಗಿವೆ- SSLC, PUC ಮತ್ತು ಪದವಿ ಶೈಕ್ಷಣಿಕ ಪ್ರಮಾಣ ಪತ್ರ ದಾಖಲೆ ನೀಡಬೇಕಾಗುತ್ತದೆ. ಈ ದಾಖಲೆ ಸಲ್ಲಿಸದಿದ್ದರೆ ಅರ್ಜಿ ಸ್ವೀಕರಿಸುವುದಿಲ್ಲ.
ಈ ತರಬೇತಿಗೆ ಅರ್ಜಿ ಸಲ್ಲಿಸಲು ಮಾನದಂಡಗಳನ್ನು ಗಮನಿಸಿದರೆ, ಅರ್ಜಿದಾರರು ಪದವೀಧರರಾಗಿಲೇಬೇಕು ಜೊತೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಕಾರ್ಮಿಕ ಕಾರ್ಡ್ ಹೊಂದಿರಬೇಕಾಗುತ್ತದೆ.
KPSC / UPSC ತರಬೇತಿಗೆ ಅರ್ಜಿ ಸಲ್ಲಿಸಲು ನವೆಂಬರ್ 21 ಕೊನೆ ದಿನಾಂಕವಾಗಿದೆ. ಇದರ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ. ಕಾರ್ಮಿಕರ ಸಹಾಯವಾಣಿ 155214 ಕ್ಕೆ ಕರೆ ಮಾಡಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬಹುದು.