BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯದವರಿಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಈ ದಾಖಲೆ ಸಲ್ಲಿಸಿ
ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ಉದ್ದೇಶದಿಂದ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಇದೀಗ ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ.
ಹೌದು!!. ಅಮೃತ ಜ್ಯೋತಿ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗೆ ಇರುವಂತಹ ಬಿಪಿಎಲ್ ಎಲ್ಲ ಕುಟುಂಬಕ್ಕೆ ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ಈ ಯೋಜನೆ ಬಳಸಿಕೊಳ್ಳಲು ಬಿಪಿಎಲ್, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ (ಆರ್ ಡಿ ಸಂಖ್ಯೆ ಸಹಿತ) ದಾಖಲೆ ನೀಡಬೇಕಾಗುತ್ತದೆ. 75 ಯೂನಿಟ್‍ಗಳವರೆಗೆ ಬಳಕೆಯ ವಿದ್ಯುತ್ ಶುಲ್ಕವನ್ನು ಡಿಬಿಟಿ ಮುಖಾಂತರ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಈ ಸೌಲಭ್ಯ ಪಡೆಯಲು ಬಯಸುವ ಫಲಾನುಭವಿಗಳು ಕೆಲ ಮಾನದಂಡಗಳನ್ನು ಅನುಸರಿಸಬೇಕಾಗಿದೆ. ಮಾಸಿಕ ವಿದ್ಯುತ್ ಬಳಕೆ ಗರಿಷ್ಟ 250 ಯುನಿಟ್‍ಗಳನ್ನು ಮೀರಬಾರದು. ಮಾಪಕ ಅಳವಡಿಕೆ ಮತ್ತು ಮಾಪಕವನ್ನು ಕಡ್ಡಾಯವಾಗಿ ಗಮನಿಸಲಾಗುತ್ತದೆ. ಜೊತೆಗೆ ದಿನಾಂಕ 30-04-2022 ರ ಅಂತ್ಯಕ್ಕೆ ಬಾಕಿ ಇರುವ ವಿದ್ಯುತ್ ಮೊತ್ತವನ್ನು ಸಂಪೂರ್ಣವಾಗಿ ಪಾವತಿ ಮಾಡಿರಬೇಕಾಗುತ್ತದೆ.
ಈ ಯೋಜನೆಗೆ ಅರ್ಹರಾದ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ‘ಸುವಿಧಾ’ ಪೋರ್ಟಲ್ ಮೂಲಕ ಸೌಲಭ್ಯ ಪಡೆಯಬಹುದು. ಇಲ್ಲವೇ ಇದಕ್ಕೆ ಸಂಬಂಧಿಸಿದGoof ಮೆಸ್ಕಾಂ ಉಪವಿಭಾಗ/ಶಾಖಾ ಕಚೇರಿಗೆ ಭೇಟಿ ನೀಡಿ ಆನ್‍ಲೈನ್‍ನಲ್ಲಿ ನೋಂದಾಯಿಸಿ ಸೌಲಭ್ಯವನ್ನು ಪಡೆಯಬಹುದಾಗಿದ್ದು, ಈ ಕುರಿತಾದ ಮಾಹಿತಿಯನ್ನು ವೀರೇಂದ್ರ ಹೆಚ್.ಆರ್ ಕಾರ್ಯನಿರ್ವಾಹಕ ಇಂಜಿನಿಯರ್(ವಿ)ಕಾರ್ಯ ಮತ್ತು ಪಾಲನೆ ವಿಭಾಗ, ಮೆಸ್ಕಾಂ ಶಿವಮೊಗ್ಗ ದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ