Good News : ತಳವಾರ ಸಮುದಾಯಕ್ಕೆ ಸಿಹಿ ಸುದ್ದಿ!

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು “ಯಾವುದೇ ಗೊಂದಲಗಳು ಇಲ್ಲದೆ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡುವಂತೆ ಆಯಾ ತಾಲೂಕಿನ ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ” ಎಂಬ ಮಾಹಿತಿಯನ್ನು ನೀಡಿದ್ದಾರೆ.

ಅವರು ಇಂದು ಜಿಲ್ಲೆಯ ಅಥಣಿ ಪಟ್ಟಣದಲ್ಲಿ ತಳವಾರ್ ಸಮುದಾಯದ ಸರ್ಕಾರಕ್ಕೆ ಅಭಿನಂದನೆ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ ಕೇಂದ್ರ ಸರ್ಕಾರದ ಸೂಚನೆಯಂತೆ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವಂತೆ ಆಯಾ ತಾಲೂಕಿನ ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.

ತಳವಾರ ಸಮುದಾಯದ ಬಹುದಿನಗಳ ಬೇಡಿಕೆಯಾದ ಮೀಸಲಾತಿಯನ್ನು ನಮ್ಮ ಸರ್ಕಾರ ಈಡೇರಿಸಿದ್ದು, ಇದಲ್ಲದೇ ಶೇ.3 ರಿಂದ 7ಕ್ಕೆ ಏರಿಸಿದ್ದು, ಜೊತೆಗೆ ಎಸ್ಟಿ ಪ್ರಮಾಣಪತ್ರ ನೀಡಲಾಗಿದೆ ಅಂಥ ಹೇಳಿದ್ದಾರೆ.

Leave A Reply

Your email address will not be published.