ಭೀಕರ ಅಪಘಾತ | ನಟಿ ದಾರುಣ ಸಾವು!

Share the Article

ಮರಾಠಿಯ ಪ್ರಸಿದ್ಧ ತುಜ್ಯಹತ್ ಜೀವ್ ರಂಗಾ ಟಿವಿ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ಕಲ್ಯಾಣಿ ಕುರಾಳೆ ಜಾಧವ್(32) ಇದೀಗ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕಲ್ಯಾಣಿ ಕುರಾಳೆ ಜಾಧವ್ ಅವರು ಶನಿವಾರ ಸಂಜೆ ಮನೆಗೆ ತೆರಳುವ ವೇಳೆ ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಡಿವೈಡರ್ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಟಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಕಲ್ಯಾಣಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಪ್ರಸಿದ್ಧ ಕಿರುತೆರೆ ಕಲಾವಿದೆ ಕಲ್ಯಾಣಿ ಕುರಾಳೆ ಜಾಧವ್ ಅವರು ಸಣ್ಣ ವಯಸ್ಸಿನಲ್ಲೇ ಸಾವನ್ನಪ್ಪಿದ್ದಾರೆ.

ಟ್ರ್ಯಾಕ್ಟರ್ ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೊಲ್ಲಾಪುರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave A Reply