SSLC ವಿದ್ಯಾರ್ಥಿಗಳೇ ಗಮನಿಸಿ : ಈ ಬಾರಿ ‘ಕೊರೋನಾ ಪಾಸ್’ ಇಲ್ಲ – ಸಚಿವ ಬಿ.ಸಿ.ನಾಗೇಶ್

ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಹತ್ತರವಾದ ಮಾಹಿತಿಯನ್ನು ನೀಡಿದ್ದಾರೆ. ಕಳೆದ ವರ್ಷದಂತೆ ಈ ವರ್ಷ ಕೊರೊನಾ ಪಾಸ್ ಇರುವುದಿಲ್ಲ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್’ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶುಕ್ರವಾರ ಹೇಳಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶುಕ್ರವಾರ ಹೇಳಿದ್ದಾರೆ.

2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು. ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ಸಚಿವರು ಇನ್ನೂ ಮುಂದುವರಿದು “ಶೇಕಡಾ 70 ರಷ್ಟು ಪಠ್ಯಕ್ರಮವನ್ನು ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು
ಪೂರ್ಣಗೊಳಿಸಿದ್ದು, ವಿದ್ಯಾರ್ಥಿಗಳಿಗೆ ಸಹಾಯಕವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಕೋವಿಡ್ ತೀವ್ರವಾಗಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ ನಿಂದ ಏಪ್ರಿಲ್ 11 ರ ಕೊನೆಯ ವಾರದಲ್ಲಿ ನಡೆಯಲಿವೆ. ಆ ಸಮಯದ ಪರಿಸ್ಥಿತಿ ನೋಡಿ ಅನಂತರ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.