ಎನರ್ಜಿ ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ | ಸಂತ್ರಸ್ತೆ ಸಾವು!

ಮಹಿಳೆಯರ ಮೇಲೆ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಅದರಲ್ಲೂ ಅತ್ಯಾಚಾರ ನಡೆಸಲು ದಿನದಿಂದ ದಿನಕ್ಕೆ ನವೀನ ತಂತ್ರಗಳನ್ನು ಬಳಸಿಕೊಳ್ಳುತ್ತಿರುವುದು ವಿಪರ್ಯಾಸ . ಈ ನಡುವೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ.

 

ಉತ್ತರ ಪ್ರದೇಶದ ಮನೆಯಲ್ಲಿ ಯುವತಿ ಒಬ್ಬಳೇ ಇದ್ದುದನ್ನು ಗಮನಿಸಿದ ರಾಜ್ ಗೌತಮ್ ಎಂಬಾತ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ತನಿಖೆಯ ಸಂದರ್ಭ, ಕಾಮುಕ ವ್ಯಕ್ತಿ ದೌರ್ಜನ್ಯ ವೆಸಗುವ ಮುನ್ನ ಕಾರ್ಯಕ್ಷಮತೆ ಹೆಚ್ಚಿಸುವ ಮಾತ್ರೆ ಸೇವಿಸಿದ್ದಾಗಿ ಹೇಳಿಕೊಂಡಿದ್ದಾನೆ. ಸಂತ್ರಸ್ತೆಯ ವಿರೋಧದ ನಡುವೆಯೂ ಆಕೆ ಮೂರ್ಛೆ ಹೋಗುವವರೆಗೂ ಮತ್ತು ಆಕೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗುವವರೆಗೂ ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಯುವತಿಗೆ ರಕ್ತಸ್ರಾವವಾಗಿದ್ದನ್ನು ಕಂಡು ಗಾಬರಿಯಾಗಿರುವ ಆರೋಪಿ ಗೌತಮ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ಘಟನೆ ನಡೆದ ಬಳಿಕ ಮನೆಗೆ ಹಿಂದಿರುಗಿದ ಸಂತ್ರಸ್ತ ಯುವತಿಯ ಕಿರಿಯ ಸಹೋದರಿ ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಸಂತ್ರಸ್ತೆ ಬಿದ್ದಿದ್ದನ್ನು ಕಂಡು ಗಾಬರಿಯಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನ ವಾಗದೆ ವೈದ್ಯರು ಆಕೆ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ.

ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ದೃಢಪಟ್ಟಿದ್ದು, ಆಕೆಯ ಖಾಸಗಿ ಭಾಗಗಳಲ್ಲಿ ಗಂಭೀರವಾದ ಗಾಯದಿಂದಾಗಿ ಅತಿಯಾದ ರಕ್ತಸ್ರಾವವು ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಿದ ಪೋಲಿಸ್ ಸಿಬ್ಬಂದಿ ಅತ್ಯಾಚಾರ ಆರೋಪದ ಮೇಲೆ 25 ವರ್ಷದ ಯುವಕ ರಾಜ್ ಗೌತಮ್ ನನ್ನು ಬಂಧಿಸಿದ್ದಾರೆ.

Leave A Reply

Your email address will not be published.