ಪ್ರವೀಣ್ ನೆಟ್ಟಾರು ಹತ್ಯೆಗೆ ಇದೇ ಕಾರಣ | ಎನ್‌ಐಎ ಬಹಿರಂಗ ಪಡಿಸಿದೆ ಕಾರಣ

ಮಂಗಳೂರು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಫೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ ಐ ಹೊಂದಿತ್ತು. ಕೆಲವೇ ದಿನಗಳಲ್ಲಿ ಪಿಎಫ್ ಐ ನಾಯಕರು ಮತ್ತು ಕಾರ್ಯಕರ್ತರು ಸಂಚು ರೂಪಿಸಿ ಪ್ರವೀಣ್ ನೆಟ್ಟಾರು ಟಾರ್ಗೆಟ್ ಮಾಡಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರವೀಣ್ ನೆಟ್ಟಾರು ಪ್ರಕರಣ ಸಂಬಂಧ ಎನ್ ಐಎ ಶಹೀದ್ ಬೆಳ್ಳಾರೆಯನ್ನು ಬಂಧಿಸಿದೆ. ಈ ಮೂಲಕ ಬಂಧಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

Leave A Reply

Your email address will not be published.