ನ.18 : ಮಂಗಳೂರಿನಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ

ಮಂಗಳೂರು: ನ.15; ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ “ಉದ್ಯಮಶೀಲತೆ ಅಭಿವೃದ್ಧಿ, ಸಾರ್ವಜನಿಕ-ಖಾಸಗಿ-ಸಹಕಾರ ಸಹಭಾಗಿತ್ವವನ್ನು ಬಲಗೊಳಿಸುವುದು ಎಂಬ  ಧ್ಯೇಯದೊಂದಿಗೆ ನ.18ರಂದು ಶುಕ್ರವಾರ ಸಮಯ ಬೆಳಗ್ಗೆ 10.00 ಗಂಟೆಗೆ ‘ಕರಾವಳಿ ಉತ್ಸವ’ ಮೈದಾನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷ ಮತ್ತು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸವನ್ನು ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರಲಾಲ್‌ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯವನ್ನು ಇರಿಸಿಕೊಂಡು ಹಲವಾರು ಯೋಜನೆಗಳನ್ನು ರೂಪಿಸಿದರು. ಇದು ಸಹಕಾರ ಚಳುವಳಯ ಬೆಳವಣಿಗೆಗೆ ಸಹಕಾರಿಯಾಯಿತು. ಇದರ ಫಲವಾಗಿ ರಾಷ್ಟ್ರದ ಸಹಕಾರ ಚಳುವಳಿಗೆ 118 ವರ್ಷಗಳ ಭವ್ಯ ಇತಿಹಾಸವಿದೆ. ವಿಶ್ವದಲ್ಲಿ ಅತ್ಯುತ್ತಮ ಸಹಕಾರ ಚಳುವಳಿಯನ್ನು ನಮ್ಮ ರಾಷ್ಟ್ರ ಹೊಂದಿರುತ್ತದೆ. ಪ್ರತಿ ವರ್ಷ ನವೆಂಬರ್ 14ರಿಂದ 20 ರವರೆಗೆ ರಾಷ್ಟ್ರದಾದ್ಯಂತ “ಅಖಿಲ ಭಾರತ ಸಕಾರ ಸಪ್ತಾಹ” ನಡೆಯುತ್ತದೆ, ಪಂಡಿತ್‌ ನೆಹರೂ ರವರ ಜನ್ಮ ದಿನವಾದ ನವೆಂಬರ್ 14ರಂದು ಸಪ್ತಾಹದ ಉದ್ಘಾಟನೆ ನಡೆದಿದೆ. ಸಪ್ತಾಹದ ಅವಧಿಯಲ್ಲಿ ಸಹಕಾರ ಚಳುವಳಿ ನಡೆದು ಬಂದ ಹಾದಿಯ ಅವಲೋಕನ ನಡೆಸಿ `ಭವಿಷ್ಯದ ಸಹಕಾರಿ ಚಳುವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಬಗ್ಗೆ ಚಿಂತನೆ ನಡೆಸುವುದೇ ಸಹಕಾರಿ ಸಪ್ತಾಹದ ಮುಖ್ಯ ಉದ್ದೇಶವಾಗಿರುತ್ತದೆ.69ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಭಾರತ 75 ಸಹಕಾರ ಸಂಘಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯ” ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದಲ್ಲಿ ಏಳು ದಿನದ ಕಾರ್ಯಕ್ರಮ ಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಯುತ್ತದೆ.

ನವೆಂಬರ್ 14ರಂದು ಸಹಕಾರ ಸಪ್ತಾಹ ಉದ್ಘಾಟನೆಯನ್ನು ಕಲಬುರಗಿಯಲ್ಲಿಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರು ನೆರವೇರಿಸಿದ್ದಾರೆ. ಹಾಗೂ ಸಮಾರೋಪ ಕಾರ್ಯ ಕ್ರಮವು ಮೈಸೂರಿನಲ್ಲಿ ನಡೆಯಲಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕರ್ನಾಟಕ  ಸರಕಾರದ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ,ಸಹಕಾರ ಸಂಘಗಳ ರಾಜ್ಯ ನಿಬಂಧಕ ಕ್ಯಾ.ಡಾ.ಕೆ. ರಾಜೇಂದ್ರ,ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್  ಭಾಗವಹಿಸಲಿದ್ದಾರೆ.

ಐವರಿಗೆಸಹಕಾರ ರತ್ನ ಪ್ರಶಸ್ತಿ ಪ್ರದಾನ :- ಕರ್ನಾಟಕ ಸರಕಾರ ರಾಜ್ಯ ಮಟ್ಟದಲ್ಲಿ ನೀಡುವ ಸಹಕಾರ ರತ್ನ ಪ್ರಶಸ್ತಿಗೆ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಿಂದ ಈ ಬಾರಿ, ಐವರು ಆಯ್ಕೆಗೊಂಡಿರುತ್ತಾರೆ. ದಕ್ಷಿಣಕನ್ನಡ ಜಿಲ್ಲೆಯಿಂದ  ಕೊಂಕೋಡಿ ಪದ್ಮನಾಭ,  ನಿತ್ಯಾನಂದ ಮುಂಡೋಡಿ, ಹಾಗೂದಂ ಬೆ ಕಾನ ಸದಾಶಿವ ರೈ. ಉಡುಪಿ ಜಿಲ್ಲೆಯಿಂದ ಜಯಕರ ಶೆಟ್ಟಿ ಇಂದ್ರಾಳಿ ಮತ್ತು  ಯಶ್‌ಪಾಲ್‌ ಸುವರ್ಣ ಇವರು ‘ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವ ಸಹಕಾರಿಗಳು, ಈ ಐದು ಮಂದಿಗೂ ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್‌ ಅವರು ಸಹಕಾರ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಸಮಾರಂಭದಲ್ಲಿ ಶಾಸಕರು, ಸಂಸದರು, ಮನಪಾ ಮೇಯರ್, ಕ್ಯಾಂಪ್ಕೋ ಅಧ್ಯಕ್ಷ , ದ.ಕ ಉಡುಪಿ ಮೀನುಗಾರರ ಮಹಾ ಮಂಡಳದ ಅಧ್ಯಕ್ಷ,ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರುಗಳು ಭಾಗವಹಿಸಲಿದ್ದಾರೆ.

ನ.18ರಂದು “ಸಹಕಾರ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಸಹಕಾರ ಜಾಥಾ’ ಆಯೋಜನೆ ಮಾಡಲಾಗಿದೆ. ಪೂರ್ವಾಹ್ನ 9.೦೦ ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಸಮಾರಂಭ ನಡೆಯುವ ಕರಾವಳಿ ಉತ್ಸವ ಮೈದಾನ ದವರೆಗೆ ಸಹಕಾರಿಗಳು ವಾಹನದ ಮೂಲಕ ಸರಕಾರ ಜಾಥಾದಲ್ಲಿ ಭಾಗವಹಿಸಲಿರುವರು. ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಸಹಕಾರ ಸಂಘಟನೆ ಯ ಮೂಲಪುರುಷ ಮೊಳಹಳ್ಳಿ ಶಿವರಾವ್‌ ಅವರನ್ನು ಸ್ಮರಿಸುವ ಹಾಗೂ ಸಹಕಾರ ಚಿಲುಮೆಯನ್ನು ಪ್ರತಿಬಿಂಬಸುವ ಆಕರ್ಷಕ ಟ್ಯಾಬ್ಲೊಗಳು, ಚೆಂಡೆ, ಕೊಂಬು, ಸ್ಯಾಕ್ರೋಫೋನ್ ಹೊನ್ನಾವರ, ಬ್ಯಾಂಡ್, ಸೇರಿದಂತೆ ವಿವಿಧ ಕಲಾತಂಡಗಳ ಸಂಯೋಜನೆಯಲ್ಲಿ ‘ಸಹಕಾರ ಜಾಥಾ
ರಾಜ್ಯ ಮಟ್ಟದ ಕಾರ್ಯಕ್ರಮದ ಜೊತೆಗೆ ಸಪ್ತಾಹದ ಏಳು ದಿನಗಳಲ್ಲಿ ಜಿಲ್ಲಾಮಟ್ಟದ ಸಹಕಾರ ಸಪ್ತಾಹದ ಆಚರಣೆ ಕೂಡ ನಡೆಯುತ್ತದೆ. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ಉಡುಪಿ ಜಿಲ್ಲಾ ಯೂನಿಯನ್ ಗಳ ಸಹಯೋಗ ದಲ್ಲಿರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ಯಲ್ಲಿ  ಬ್ಯಾಂಕ್ ನ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಟಿ.ಜಿ.ರಾಜರಾಮ ಭಟ್ , ವಿನಯ ಕುಮಾರ್ ಸೂರಿಂಜೆ, ನಿರ್ದೇಶಕ ರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಭಾಸ್ಕರ್ ಕೋಟ್ಯಾನ್, ಎಸ್ ಬಿ.ಜಯರಾಮ ರೈ, ಶಶಿ ಕುಮಾರ್ ರೈ ಬಾಲ್ಯೋಟ್ಟು, ವಾದಿ ರಾಜ ಶೆಟ್ಟಿ, ರಾಜು ಪೂಜಾರಿ, ಜೈರಾಜ್ ಬಿ.ರೈಅಶೋಕ್ ಕುಮಾರ್ ಶೆಟ್ಟಿರಾಜೇಶ್ ರಾವ್, ಮೋನಪ್ಪ ಶೆಟ್ಟಿ ಎಕ್ಕಾರು,ದ.ಕ ಮತ್ತು ಉಡುಪಿ ಜಿಲ್ಲೆಗಳ ಸಹಕಾರಿ ಯೂನಿಯನ್ ಗಳ ಅಧ್ಯಕ್ಷ ರಾದ ಪ್ರಸಾದ್ ಕೌಶಲ್ಯ ಶೆಟ್ಟಿ ಮತ್ತು ಜಯಕರ ಶೆಟ್ಟಿ ಇಂದ್ರಾಳಿ ಎಸ್ ಸಿ ಡಿ ಸಿಸಿ ಬ್ಯಾಂಕ್ ನ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ (ಪ್ರಭಾರ) ಗೋಪಿನಾಥ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

Leave A Reply

Your email address will not be published.