ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು!
ದಾವಣಗೆರೆ ಹೊನ್ನಾಳಿಯ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ.
ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ನೌಕರರು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದು, ಆ ದೂರಿನ ಅನ್ವಯ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಶಾಸಕರ ತಮ್ಮನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿ, ಬಳಿಕ ಕಾಲುವೆಯಲ್ಲಿ ಕಾರಿನ ಸಹಿತ ಶವವಾಗಿ ಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಕೂಡ ಮಾಡಿದ್ದರು. ಈ ಪ್ರಕರಣದ ನಡುವೆ ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.