ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿ | ಕಿಡ್ನ್ಯಾಪ್ ನಡೆದೇ ಹೋಯ್ತು!

Share the Article

ಒಬ್ಬ ವಿದ್ಯಾರ್ಥಿ ಕೇವಲ ಯುವತಿಯನ್ನು ಮಾತನಾಡಿಸಿದ ಕಾರಣಕ್ಕಾಗಿ ಆತನನ್ನು ಅಪಹರಿಸಿದ ಘಟನೆ ಹುಬ್ಬಳ್ಳಿ ಯ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹುಬ್ಬಳ್ಳಿ ಯ ಗೋಕುಲ ರಸ್ತೆ ಅಕ್ಷಯ ಪಾರ್ಕ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಂಜುನಾಥ ಎಂಬಾತ ಯುವತಿಯನ್ನು ಮಾತನಾಡಿಸಿದ್ದ. ಇದೇ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿತ್ತು.

ವಿದ್ಯಾರ್ಥಿಗಳ ಜಗಳದ ನಂತರ ನಾಲ್ವರು ಯುವಕರ ಗುಂಪು ವಿದ್ಯಾರ್ಥಿ ಮಂಜುನಾಥನನ್ನು ಅಪಹರಿಸಿ ಕುಸುಗಲ್ ರಸ್ತೆಯ ಮಿಡ ಮ್ಯಾಕ್ ಹಿಂಬದಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೇಕಾಬಿಟ್ಟಿ ಮನಬಂದಂತೆ ಹಲ್ಲೆ ನಡೆಸಿದೆ.

ಹಲ್ಲೆ ನಡೆಸಿದ ವಿಷಯ ಹುಬ್ಬಳ್ಳಿ ಯ ಗೋಕುಲ ರಸ್ತೆ ಠಾಣೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದಾಗ ಅಪಹರಣಕ್ಕೊಳಗಾದ ವಿದ್ಯಾರ್ಥಿಯನ್ನು ರಕ್ಷಿಸಿದ್ದಾರೆ.

ಈ ಮೇಲಿನ ಘಟನೆಗೆ ಸಂಬಂಧಿಸಿದಂತೆ ಕೇಶ್ವಾಪುರ ತಳವಾರ ಓಣಿಯ ಮಹಮ್ಮದ್ ಗೌಸ್, ಶಬರಿನಗರದ ಸೋಹೆಲ್ ಇವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಪ್ರತೀಕ್ ಮತ್ತು ಸೌರಬ್ ಪರಾರಿಯಾಗಿದ್ದಾರೆ.

ಹೆಚ್ಚಿನ ವಿಚಾರಣೆ ನಂತರ ಸಂಕ್ಷಿಪ್ತ ವಿಚಾರ ತಿಳಿದು ಬರಬೇಕಿದೆ.

Leave A Reply