KEA Recruitment 2022 : ಕೆಇಎ ಯಿಂದ ಪಶುವೈದ್ಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ!

ಕರ್ನಾಟಕ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ . ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)( KEA) ಕರ್ನಾಟಕ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳಿಗಾಗಿ ಪಶುವೈದ್ಯ ಸಹಾಯಕ ಹುದ್ದೆಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಪಶುವೈದ್ಯಕೀಯ ಸಹಾಯಕರ ಹುದ್ದೆಗಳಿಗೆ ಒಟ್ಟು 250 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ @www.kea.kar.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. KEA ನೇಮಕಾತಿ ಆನ್‌ಲೈನ್ ನೋಂದಣಿ ಅಕ್ಟೋಬರ್ 5 ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನವನ್ನು ವಿಸ್ತರಣೆ ಮಾಡಲಾಗಿದ್ದು, ನವೆಂಬರ್ 26, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಹಾಗೂ ನವೆಂಬರ್ 28, 2022ರ ವರೆಗೆ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ BVSc, BVSc (AH), BSc ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು General, 2A, 2B, 3A, 3B ಅಭ್ಯರ್ಥಿಗಳಿಗೆ 750 ರೂ. ಮತ್ತು SC/ST/Cat-I/ ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಬಹುದು.

ವೇತನ ವಿವರ: ಈ ಹುದ್ದೆಗೆ ಅನುಸಾರವಾಗಿ ಮಾಸಿಕ ರೂ. 21,400/- ರಿಂದ ರೂ. 78,200/- ವೇತನ ದೊರೆಯಲಿದೆ.

Leave A Reply

Your email address will not be published.