PM Kisan : 13ನೇ ಕಂತಿನ ಬಗ್ಗೆ ಪಿಎಂ ಮೋದಿ ಟ್ವಿಟ್

ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆ ರೈತರಿಗೆ ಮಾಡಿರುವಂತಹ ಯೋಜನೆ. ಈ ಯೋಜನೆಯಡಿಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ಕೇಂದ್ರ ಸರ್ಕಾರದಿಂದ ಬರುತ್ತದೆ ಅದೇ ರೀತಿಯಾಗಿ ರಾಜ್ಯ ಸರ್ಕಾರದಿಂದ 4,000 ಬರುತ್ತದೆ.

 

13ನೇ ಕಂತಿನ ಪಿಎಂ ಕಿಸಾನ್ ಸನ್ಮಾನ್ ನಿಧಿ ಹಣವು ಬ್ಯಾಂಕ್ ಖಾತೆಗೆ ಬದಲಾಗಿ ಆಧಾರ್ ಕಾರ್ಡಿಗೆ ಬರುತ್ತದೆ, ಎರಡು ಮೂರು ಬ್ಯಾಂಕ್ ಖಾತೆಯನ್ನು ಹೊಂದಿರುವ ರೈತರಿಗೆ ಯಾವ ಖಾತೆಗೆ ಹಣ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ನೀಡಲಾಗಿದೆ.

13 ನೇ ಕಂತು ಜನವರಿ ಮೊದಲ ವಾರದಲ್ಲಿ ನಿಮ್ಮ ಖಾತೆಗೆ ಬರಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದಾರೆ.

ನಿಮ್ಮಕಂತು ಸ್ಟೇಟಸ್ ಈ ರೀತಿ ಪರಿಶೀಲಿಸಿ

  1. ಕಂತಿನ ಸ್ಟೇಟಸ್ ನೋಡಲು, ನೀವು PM ಕಿಸಾನ್ ವೆಬ್‌ಸೈಟ್‌ಗೆ ಹೋಗಿ.
  2. ಈಗ ರೈತರ ಕಾರ್ನರ್ ಮೇಲೆ ಕ್ಲಿಕ್ ಮಾಡಿ.
  3. ಈಗ ಬೆನಿಫಿಶಿಯರಿ ಸ್ಟೇಟಸ್ ಆಯ್ಕೆಯ ಮೇಲೆ ಕ್ಲಿಕ್
    ಮಾಡಿ.
  4. ಈಗ ಹೊಸ ಪುಟ ತೆರೆದುಕೊಳ್ಳುತ್ತದೆ.
  5. ಇಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
  6. ಇದರ ನಂತರ ನೀವು ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ.

Leave A Reply

Your email address will not be published.