ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ `ಕೆ.ಆರ್. ಮುರಳಿಕೃಷ್ಣ’ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ (63) ಅವರು ಇಂದು ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಸಹಕಾರ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

 

ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು ಚಿತ್ರಗಳನ್ನು ಇವರು ನಿರ್ದೇಶನ ಮಾಡಿದ್ದಾರೆ. ಗರ ಸಿನಿಮಾದ ಮೂಲಕ ಬಾಲಿವುಡ್ ನ ಖ್ಯಾತ ಹಾಸ್ಯ ಕಲಾವಿದ ಜಾನಿ ಲಿವರ್ ಅವರನ್ನು ಕನ್ನಡ ಸಿನಿಮಾ ರಂಗಕ್ಕೆ ಪರಿಚಯಿಸಿದ್ದರು. ಈ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ವೃತ್ತಿಯಲ್ಲಿ ವಕೀಲರಾಗಿದ್ದರೂ, ಪ್ರವೃತ್ತಿಯಲ್ಲಿ ಸಿನಿಮಾ ನಿರ್ದೇಶಕರಾಗಿ, ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು

Leave A Reply

Your email address will not be published.