ಕೆಂಪೇಗೌಡ ಪ್ರತಿಮೆ ನೋಡಲು ಬಂದವರಿಗೆ ಅಲ್ಲಿನವರು ಹೇಳಿದ್ದೇನು ಗೊತ್ತಾ? ಶಾಕ್ ಆಗ್ತೀರಾ!

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ‘ಪ್ರಗತಿಯ ಪ್ರತಿಮೆ’ ಎಂದೇ ಕರೆಯಲ್ಪಡುವ ನಾಡಪ್ರಭು ಕೆಂಪೇಗೌಡರ 108 ಎತ್ತರದ ಪ್ರತಿಮೆ ನಿರ್ಮಿಸಲಾಗಿದೆ. ಭಾನುವಾರ ರಜೆ ದಿನವಾದ ಕಾರಣ ನೂರಾರು ಜನರು ಪ್ರತಿಮೆ ನೋಡಲು ಜನರು ಬಂದಿದ್ದರು. ಆದಾಗ ಅಲ್ಲಿನ ಸಿಬ್ಬಂದಿ ವರ್ಗದವರು ಹೇಳಿದ್ದೇನು ಗೊತ್ತಾ?

ಅಲ್ಲಿನ  ಗೇಟ್ ಹಾಕಲಾಗಿದ್ದು, ಪ್ರತಿಮೆ ನೋಡಲು ಹೋದ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಗೇಟ್ ಹಾಕುವುದಿದ್ದರೆ ಉದ್ಘಾಟನೆ ಮಾಡಿದ್ದು ಯಾಕೆ? ಎಂದು ಜನರೇ ಪ್ರಶ್ನಿಸಿದರು. ಯಾಕೆಂದರೆ ಇಲ್ಲಿಂದ ಕಾಮಗಾರಿ ಇನ್ನು ಕೂಡ ಸಂಪೂರ್ಣ ಪೂರ್ಣಗೊಂಡಿಲ್ಲ. ಇದರ ಮಾಹಿತಿ ಕೊರತೆ ಆಯ್ತು ಜನರಿಗೆ. ಅಲ್ಲಿ ನೆರೆದಿದ್ದವರು ಆಕ್ರೋಶ ವ್ಯಕ್ತಪಡಿಸಿದ ನಂತರ ಈ ಬಗ್ಗೆ ಮಾಹಿತಿಯನ್ನು  ಅಲ್ಲಿನ ಸಿಬ್ಬಂದಿ ವರ್ಗದವರು  ನೀಡಿದರು.

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಈಗಾಗಲೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರಿದೆ ಎಂಬುದು ಹೆಮ್ಮೆಯ ವಿಚಾರ. ನಗರವನ್ನು ನಿರ್ಮಾಣ ಮಾಡಿದವರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಇದಾಗಿದೆ. ಈ ಪ್ರತಿಮೆ ಸಮೀಪವೇ ಕೆಂಪೇಗೌಡ ಥೀಮ್ ಪಾರ್ಕ್ ಸಹ 23 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ. ಇದಕ್ಕೆ ಸಹ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ್ದಾರೆ.

Leave A Reply

Your email address will not be published.