Education News: ವಿದ್ಯಾರ್ಥಿಗಳೇ ಗಮನಿಸಿ, ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ | ಹೀಗೆ ರಿಜಿಸ್ಟರ್ ಮಾಡಿ

ರಾಜ್ಯ ವಿಜ್ಞಾನ ಪರಿಷತ್ತು ಆಯೋಜಿಸಿರುವ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ.

ಈ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದವರಿಗೆ ಇದೊಂದು ಒಳ್ಳೆಯ ಅವಕಾಶವಾಗಿದ್ದು, ಕೂಡಲೆ ನೋಂದಣಿ‌ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು (Students) ಅವಕಾಶವನ್ನು ಬಳಸಿಕೊಳ್ಳುವಂತೆ ರಾಜ್ಯ ವಿಜ್ಞಾನ ಪರಿಷತ್ (Karnataka Vijnana Parishat) ಕೋರಿಕೊಂಡಿದೆ.

ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳೇ ಗಮನಿಸಿ!!!.. ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಹೇಗೆ ರಿಜಿಸ್ಟರ್ ಮಾಡಬೇಕು ಎಂದು ಚಿಂತಿಸುತ್ತಿದ್ದರೆ, ಇಲ್ಲಿದೆ ಅದರ ಮಾಹಿತಿ:

ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ ಪ್ರತಿಷ್ಠಿತ ವಿಜ್ಞಾನ ಸಮಾವೇಶದಲ್ಲಿ (Science Events) ಭಾಗವಹಿಸಲು ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಇಚ್ಚಿಸುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ‘ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಜೀವಿ ಪರಿಸರ ವ್ಯವಸ್ಥೆ ಅರ್ಥಮಾಡಿಕೊಳ್ಳೋಣ’ ಎಂಬ ವಿಷಯದ ಕುರಿತು ವೈಜ್ಞಾನಿಕ ಯೋಜನಾ ಮಾದರಿ ಸಿದ್ಧಪಡಿಸಬೇಕಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯು ಡಿಸೆಂಬರ್ ಮೊದಲನೇ ವಾರದ ಒಳಗೆ ರಾಜ್ಯದೆಲ್ಲೆಡೆ ನಡೆಯಲಿದ್ದು, ಪ್ರತಿ ಜಿಲ್ಲೆಯಿಂದ 10 ತಂಡಗಳನ್ನು ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ.

ರಾಜ್ಯಮಟ್ಟದ ಸ್ಪರ್ಧೆಯು ಡಿಸೆಂಬರ್ ಮಧ್ಯಭಾಗದಲ್ಲಿ ನಡೆದು, 30 ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಾಗುವ ಕುರಿತು ವಿಜ್ಞಾನ ಪರಿಷತ್ತಿನ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಗುಜರಾತ್‌ನಲ್ಲಿ ಡಿಸೆಂಬರ್ 27 ರಿಂದ 31ರವರೆಗೆ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳ ಬಹುದಾಗಿದೆ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 99807 59704 ಅಥವಾ 94486 24070 ಯನ್ನು ಸಂಪರ್ಕಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಸಮಾವೇಶಕ್ಕೆ ನೊಂದಣಿ ಮಾಡಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ:

Leave A Reply

Your email address will not be published.