ಶಾಲಾ ಆವರಣದಲ್ಲಿ ಊಟ ಮಾಡುತ್ತಿದ್ದ ಮಕ್ಕಳ ಮೇಲೆಯೇ ಬಿತ್ತು ವಿದ್ಯುತ್‌ ಕಂಬ | ಮೂವರು ವಿದ್ಯಾರ್ಥಿಗಳು ಗಂಭೀರ

ಕೋಲಾರ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಊಟ ಮಾಡುತ್ತಿರುವ ಸಂದರ್ಭ ವಿದ್ಯುತ್ ಕಂಬ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಕೆಇಬಿ ಸಿಬ್ಬಂದಿ ಕಂಬಗಳನ್ನು ಬದಲಾವಣೆ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಕೆಇಬಿ ಸಿಬ್ಬಂದಿ ಮರದ ರೆಂಬೆ ಕಡಿದಿದ್ದು, ಅದು ತಂತಿಗಳ ಮೇಲೆ ಬಿದ್ದು ಎರಡು ವಿದ್ಯುತ್​ ಕಂಬಗಳು ನೆಲಕ್ಕೆ ಉರುಳಿದ್ದು, ಈ ಘಟನೆಯಲ್ಲಿ ದಿನೇಶ್, ಭರತ್, ಚರಣ್ ಎಂಬ ವಿದ್ಯಾರ್ಥಿಗಳಿಗೆ ಗಾಯಗಳಾಗಿದೆ.

ಹಾಗಾಗಿ, ಈ ವಿದ್ಯಾರ್ಥಿಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಪೈಕಿ ಗಂಭೀರ ಗಾಯಗೊಂಡಿರುವ ದಿನೇಶ್​ನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭರತ್​ಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ, ಚರಣ್​ಗೆ ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave A Reply

Your email address will not be published.