15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ : ಇಂದು ಸಂಜೆ 6ಕ್ಕೆ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಪ್ರಕಟ

15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Karnataka Teacher Recruitment) ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ಅವರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ( Primary School Teacher Recruitment) ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಇಂದು (ನ.18) ಸಂಜೆ 6 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ನವೆಂಬರ್ 15, 2022ರಂದು ಶಿಕ್ಷಣ ಸಚಿವರು ಟ್ವಿಟ್ಟರ್ ನಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (Graduate Primary School Teachers Recruitment) ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂಬುದಾಗಿ ಹೇಳಿದ್ದರು. ಈ ಬೆನ್ನಲ್ಲೇ ಇಂದು ಸಂಜೆ 6 ಗಂಟೆಗೆ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸುವುದಾಗಿ ಮಾಹಿತಿ ನೀಡಿದ್ದಾರೆ.

Leave A Reply

Your email address will not be published.