ನ್ಯಾಷನಲ್ ಕಾನ್ಫರೆನ್ಸ್ ಪಕ್ಷʼದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ʻಫಾರೂಕ್ ಅಬ್ದುಲ್ಲಾʼ

Share the Article

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (JKNC) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ(Farooq Abdullah) ಇಂದು ರಾಜೀನಾಮೆ ನೀಡಿದ್ದಾರೆ.

ಶ್ರೀನಗರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಫಾರೂಕ್ ಅಬ್ದುಲ್ಲಾ, ʻನನ್ನ ಆರೋಗ್ಯ ಸರಿಯಾಗಿಲ್ಲ. ಹೀಗಾಗಿ, ಇನ್ನು ಈ ಪಕ್ಷವನ್ನು ಮುನ್ನಡೆಸಲು ನನಗೆ ಸಾಧ್ಯವಿಲ್ಲʼ ಎಂದು ಹೇಳಿದ್ದಾರೆ.

ಡಿಸೆಂಬರ್ 5 ರಂದು ಪಕ್ಷದ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಜೆಕೆಎನ್​ಸಿ ಪಕ್ಷದ ಉಪಾಧ್ಯಕ್ಷ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಹುದ್ದೆಗೆ ಏರುವ ನಿರೀಕ್ಷೆಯಿದೆ.

Leave A Reply