One plus : ಒನ್ ಪ್ಲಸ್ ಫೋನ್ ನಲ್ಲಿ ಭಾರೀ ಬೆಲೆ ಇಳಿಕೆ ! ಗ್ರಾಹಕರಿಗೆ ಬಂಪರ್ ಸಿಹಿಸುದ್ದಿ!

Share the Article

ಈಗಿನ ಮೊಬೈಲ್ ಬಳಕೆದಾರರು ಯಾವಾಗ ಹೊಸ ಸ್ಮಾರ್ಟ್​ಫೋನ್​ಗಳು ರಿಲೀಸ್​ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಮಾರ್ಟ್​ಫೋನ್​ ಉಪಯೋಗಿಸದವರು ಯಾರು ಇಲ್ಲ. ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುತ್ತಿದೆ.

ಪ್ರಸ್ತುತ ಇತ್ತೀಚಿಗಿನ ಫೋನ್‌ಗಳಲ್ಲಿ ಒಂದಾದ ಒನ್‌ಪ್ಲಸ್‌ 10 ಪ್ರೊ (OnePlus 10 Pro) ಭರ್ಜರಿ ಬೆಲೆ ಇಳಿಕೆ ಕಂಡಿದ್ದು ಜನರಿಗೆ ಖುಷಿ ಸುದ್ದಿ ನೀಡಿದೆ.

ಹೌದು, ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 10 ಪ್ರೊ (OnePlus 10 Pro) ಫೋನ್‌ ಬೆಲೆಯಲ್ಲಿ 5,000ರೂ. ಕಡಿತ ಆಗಿದೆ. ಇನ್ನು ಈ ಫೋನ್ 8GB + 128GB ಮತ್ತು 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಎರಡು ವೇರಿಯಂಟ್‌ಗಳು ಬೆಲೆ ಇಳಿಕೆ ಕಂಡಿವೆ.

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ವಿಶೇಷತೆ :

  • ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 1,440 x 3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ.
  • ಇದು ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್‌ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ.
  • ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್‌ ನೀಡಲಿದೆ.
  • ಈ ಡಿಸ್‌ಪ್ಲೇ sRGB ಬಣ್ಣದ ಹರವುಗಳನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದಿದೆ.
  • ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದೆ.
  • ಇದು ಆಂಡ್ರಾಯ್ಡ್‌ 12 ನಲ್ಲಿ ಆಕ್ಸಿಜನ್‌ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  • ಜೊತೆಗೆ 8GB + 128GB ಮತ್ತು 12GB + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.
  • ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ.
  • ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX789 ಸೆನ್ಸಾರ್‌,
  • ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ.
  • ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.
  • ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.
  • ಇದು 80W ಸೂಪರ್‌ವೂಕ್‌ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್‌ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.
  • ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ.
  • ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.
  • ಭಾರತದಲ್ಲಿ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 8GB + 128GB ಮತ್ತು 12GB + 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.
  • ಹಾಗೆಯೇ ಈ ಫೋನ್ ಎಮರಾಲ್ಡ್ ಫಾರೆಸ್ಟ್ ಮತ್ತು ವೊಲ್ಕ್ಯಾನಿಕ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಈ ಮೇಲಿನ ವಿಶೇಷತೆ ಹೊಂದಿದ್ದು ಇನ್ನು ಬೆಲೆ ಇಳಿಕೆ ನಂತರ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 8GB + 128GB ವೇರಿಯಂಟ್‌ ಬೆಲೆ 61,999ರೂ. ಆಗಿದ್ದು, ಅದೇ ರೀತಿ 12GB + 256GB ವೇರಿಯಂಟ್‌ ಬೆಲೆಯು 66,999ರೂ. ಆಗಿದೆ.

ಹೊಸ ಸ್ಮಾರ್ಟ್ ಫೋನ್ ಖರೀದಿಸುವ ಯೋಚನೆ ಇದ್ದಲ್ಲಿ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ನ್ನು ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ.

Leave A Reply