ಟೀಚರ್ ಹುದ್ದೆ ಖಾಲಿ ಇದೆ | ಮಾಸಿಕ ರೂ.40,000 ವೇತನ !

UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad)ದಲ್ಲಿ Part-Time ಟೀಚರ್ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಧಾರವಾಡದಲ್ಲಿ ಉದ್ಯೋಗ ಮಾಡಬಯಸುವವರು ಈ ಹುದ್ದೆಗಳ ಸದುಪಯೋಗ ಪಡೆದುಕೊಳ್ಳಬಹುದು.

ಸಂಸ್ಥೆ : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ
ಹುದ್ದೆ : ಪಾರ್ಟ್​ ಟೈಂ ಟೀಚರ್
ಒಟ್ಟು ಹುದ್ದೆ : 2
ವಿದ್ಯಾರ್ಹತೆ : M.Sc, MVSc, Ph.D
ವೇತನ: ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಪಾರ್ಟ್​ ಟೈಂ ಟೀಚರ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000 ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 16/11/2022
ಸಂದರ್ಶನ ನಡೆಯುವ ದಿನಾಂಕ: 30/11/2022 ಬೆಳಗ್ಗೆ 11 ಗಂಟೆಗೆ

ವಿದ್ಯಾರ್ಹತೆ: ಪಾರ್ಟ್​ ಟೈಂ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅನಿಮಲ್ ಸೈನ್ಸ್/ಪಶುವೈದ್ಯಕೀಯ ವಿಜ್ಞಾನದಲ್ಲಿ M.Sc, MVSc, Ph.D ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಸಂದರ್ಶನ ನಡೆಯುವ ಸ್ಥಳ: ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 30 ರಂದು ಬೆಳಗ್ಗೆ 11 ಗಂಟೆಗೆ ಈ ಕೆಳಕಂಡ ವಿಳಾಸದಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬೇಕು.
ವಿಳಾಸ : ಡೀನ್ ಕಚೇರಿ(ಕೃಷಿ), ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಕರ್ನಾಟಕ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ (Walk-in-Interview) ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.

Leave A Reply

Your email address will not be published.