PUC Exam Date: ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಮಹತ್ವದ ಮಾಹಿತಿ !
ಮಾರ್ಚ್ 2023ರಲ್ಲಿ ನಡೆಯಲಿರುವ, ದ್ವಿತೀಯ ಪಿಯುಸಿ 2023ರ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಹೌದು ನೋಂದಣಿಗೆ ಅವಧಿ ವಿಸ್ತರಿಸಲಾಗಿದೆ.
ಈ ಮುನ್ನ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳ ನೋಂದಣಿಗೆ ನವೆಂಬರ್ 15 ರವರೆಗೆ ಅವಕಾಶ ನೀಡಲಾಗಿತ್ತು. ಆದರೆ ಕೆಲವು ಪಾಲಕರು ಮತ್ತು ವಿದ್ಯಾರ್ಥಿಗಳ ಮನವಿ ಮೇರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ನವೆಂಬರ್ 28ರ ವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನಿಗದಿ ಮಾಡಿರುವ ಶುಲ್ಕದ ಜತೆಗೆ 500 ರೂ. ದಂಡಶುಲ್ಕ ಹಾಗೂ ಗರಿಷ್ಠ 700 ರೂ. ಕಾರ್ಯನಿರತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕಾಲೇಜಿಗೆ ಶುಲ್ಕ ಪಾವತಿಸಲು ನವೆಂಬರ್ 28 ಕೊನೆಯ ದಿನವಾಗಿದೆ ಎಂದು ತಿಳಿಸಲಾಗಿದೆ.
ಕಾಲೇಜುಗಳು ಖಜಾನೆಗೆ ಶುಲ್ಕ ಸಂದಾಯ ಮಾಡಲು ನವೆಂಬರ್ 29 ಮತ್ತು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.