ಸಮರವೀರ ಕೆದಂಬಾಡಿ ರಾಮಯ್ಯಗೌಡ ಪ್ರತಿಮೆ ಅನಾವರಣ | ವೀರನಿಗೆ ನಮನ ಸಲ್ಲಿಸಲು ಹರಿದು ಬಂದ ಜನಪ್ರವಾಹ

1837 ರ ಅಮರ ಸುಳ್ಯದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಸುವರ್ಣ ಚರಿತ್ರೆ ಬರೆದ ಸಂಘಟನಾ ಚತುರ, ಸಮರ ನಾಯಕ ಅಪ್ರತಿಮ ಸ್ವಾತಂತ್ರ್ಯ ವೀರ ಹುತಾತ್ಮ ಕೆದಂಬಾಡಿ ರಾಮಯ್ಯ ಗೌಡರ “ಶೌರ್ಯದ ಪ್ರತಿಮೆ ಲೋಕಾರ್ಪಣೆ” ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಮಾರಂಭದ ಸುತ್ತಮುತ್ತ ಜನಸಾಗರ ತುಂಬಿತುಳುಕುತ್ತಿತ್ತು.

ಕಂಚಿನ ಲೋಕಾರ್ಪಣೆಯ ಅದ್ಭುತ ಕ್ಷಣಗಳನ್ನು ಕಂಡು ಜನರು ಧನ್ಯರಾದರು ಎಂದೇ ಹೇಳಬಹುದು.ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಮಂಗಳೂರು ನಗರದ ಬಾವುಟಗುಡ್ಡೆಯಲ್ಲಿ ಶನಿವಾರ ಲೋಕಾರ್ಪಣೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಗೌರವಾನ್ವಿತ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಭಾಗಿಯಾಗಿದ್ದರು.

ಮಂಗಳೂರಿನ ಸಚಿವರು, ಬಿಜೆಪಿ ಪಕ್ಷದ ನಾಯಕರು ಈ ಸುಸಂದರ್ಭಕ್ಕೆ ಸಾಕ್ಷಿಯಾಗಿದ್ದರು. ಈ ವೇಳೆ ಸಾಗರೋಪತಿಯಲ್ಲಿ ಜನ ಸಾಗರ ತುಂಬಿ ತುಳುಕಿದ್ದು, ಹಾಗೂ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಬಿಜೆಪಿ ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯಿ.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಾಗಿ ಈ ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದಾರೆ.

Leave A Reply

Your email address will not be published.