ಮಂಗಳೂರು : ಆಟೋ ಸ್ಫೋಟ ಪ್ರಕರಣ : ರಾಜ್ಯಾದ್ಯಂತ ಹೈಅಲರ್ಟ್ ಘೋಷಣೆ
ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಶನಿವಾರ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಆಗಮಿಸಿದ ಸಂಧರ್ಭದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರ ಬೆಳಕಿಗೆ ಬಂದಿದೆ.
ಹೌದು ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ ರಾಜ್ಯದಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲು ಗೃಹ ಇಲಾಖೆ ಪೊಲೀಸರಿಗೆ ಸೂಚನೆ ನೀಡಿದೆ.
ಏರ್ ಪೋರ್ಟ್, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳು, ಪ್ರವಾಸಿ ತಾಣಗಳು, ದೇವಾಲಯಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸೂಚಿಸಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ ಬೆನ್ನಲ್ಲೇ ಸ್ಫೋಟ ಸಂಭವಿಸಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಸ್ಫೋಟವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನಿಂದ ಮತ್ತಷ್ಟು ಬಾಂಬ್ ತಜ್ಞರ ತಂಡ ಘಟನಾ ಸ್ಥಳಗ್ಗೆ ಆಗಮಿಸಲಿದೆ. ಇಂದು ಮಂಗಳೂರಿಗೆ ಎನ್‍ಐಎ ತಂಡವೂ ಆಗಮಿಸುವ ಸಾಧ್ಯತೆ ಸಹ ಇದೆ.