Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರಾವಳಿ ಸೇರಿ ಹಲವೆಡೆ ನಾಳೆಯಿಂದ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಮಳೆಯ ಅವಾಂತರ ಒಂದಲ್ಲ ಎರಡಲ್ಲ. ಈಗಾಗಲೇ ಕೆಲವೆಡೆ ಪ್ರತಿಯೊಬ್ಬರ ಜೀವನ ಅಸ್ತ ವ್ಯಸ್ತ ಆಗಿ ಕಂಗಳಾಗಿ ಹೋಗಿದ್ದಾರೆ. ಆದ್ದರಿಂದ ಎಲ್ಲೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕನಿಷ್ಠ ಪಕ್ಷ ಜನರು ಮಳೆ ಬಂದ ನಂತರ ದಿಕ್ಕಾಪಾಲಗಿ ಓಡುವುದಕ್ಕಿಂದ ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ.

ಈಗಾಗಲೇ ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದರ ಮಧ್ಯೆ ಈಗ ಮತ್ತೆ ಮಳೆಯ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಂಜು ಕೂಡ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಷಿಯಸ್, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಷಿಯಸ್ ಇರಲಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಅಬ್ಬರಿಸಿದ ಮಳೆರಾಯ ಕಳೆದ ಒಂದು ವಾರದಿಂದ ಶಾಂತಗೊಂಡಿದ್ದ. ಮಳೆ ಕಡಿಮೆಯಾಗಿ, ವಿಪರೀತ ಚಳಿ ಶುರುವಾಗಿತ್ತು. ಬೆಂಗಳೂರಿನಲ್ಲಿ ಸುಮಾರು 10 ದಿನಗಳಿಂದ ಚಳಿ ಹೆಚ್ಚಳವಾಗಿತ್ತು. ಚಳಿಯ ನಡುವೆಯೇ ಬೆಂಗಳೂರಿನಲ್ಲಿ ನಾಳೆಯಿಂದ ನವೆಂಬರ್ 22ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಚದುರಿದ ತುಂತುರು ಮತ್ತು ಗುಡುಗು ಸಹಿತ ಕೆಲವು ಭಾರಿ ಬೀಳುವ ಸಾಧ್ಯತೆಯಿದೆ. ತಮಿಳುನಾಡು, ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಂಗಳವಾರದಿಂದ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ, ಚಳಿ ಕೊಂಚ ಕಡಿಮೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯ ಮುನ್ಸೂಚನೆಯಿದೆ.

ಇಂದು ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ತಮಿಳುನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಚದುರಿದ ತುಂತುರು ಮತ್ತು ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ. ಒಡಿಶಾದಲ್ಲೂ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

Leave A Reply

Your email address will not be published.