ಕಡಬ : ಚಲಿಸುತ್ತಿದ್ದ ಬಸ್‌ನಿಂದ ಎಸೆಯಲ್ಪಟ್ಟು ಮಹಿಳೆ ಸಾವು

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ಬಳಿ ನಡೆದಿದೆ.

 

ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದ್ದು ಬೆಂಗಳೂರಿನ ದಾಸರಹಳ್ಳಿಯ ನಾಗರತ್ಮಮ್ಮ( 58ವ) ಮೃತಪಟ್ಟವರು.

ಬೆಂಗಳೂರಿನಿಂದ ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನಿಂದ ರೈಲು ಮೂಲಕ ಬಂದು ನೆಟ್ಟಣ( Subrahmanya Road railway station) ನಲ್ಲಿ ಬಂದಿಳಿದಿದ್ದರು.

ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಧರ್ಮಸ್ಥಳಕ್ಕೆ ತೆರಳಲು ಬಸ್ ಏರಿದ್ದರು.ಬಸ್ ಮುಂಭಾಗ ಕುಳಿತ್ತಿದ್ದ ಮಹಿಳೆಯು ಕೇಪು ದೇವಸ್ಥಾನದ ಬಳಿ ಬಸ್ ತಲುಪುತ್ತಿದ್ದಂತೆ ಬ್ಯಾಗ್ ತೆಗೆದುಕೊಳ್ಳಲು ಹಿಂಬದಿಗೆ ಹೋಗಿದ್ದರು ಎನ್ನಲಾಗಿದೆ.

ತಿರುವು ರಸ್ತೆಯಲ್ಲಿ ಬಸ್ ಚಲಿಸಿದ ಹಿನ್ನೆಲೆ ಬಸ್ ನ ಹಿಂಬದಿ ಬಾಗಿಲು ಹಾಕದ ಕಾರಣ ಏಕಾಏಕಿ ಮಹಿಳೆ ಬಸ್ ನಿಂದ ಹೊರಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ

ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.