Love Jihad : ಮುಸ್ಲಿಂ ವಿವಾಹಿತನಿಂದ ಹಿಂದೂ ಧರ್ಮದ ಬಾಲಕಿಯ ರೇಪ್‌ | ಮುಸ್ಲಿಂ ಧರ್ಮಕ್ಕೆ ಮತಾಂತರವಾದರೆ ಮಾತ್ರ ಮದುವೆ ಎಂದ ಕೀಚಕ

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇದ್ದು, ಅದರಲ್ಲೂ ಕೂಡ ಅಪ್ರಾಪ್ತರ ಮೇಲಿನ ಅತ್ಯಾಚಾರ ಎಸಗುವ ಪ್ರಕರಣಗಳೂ ಎಗ್ಗಿಲ್ಲದೆ ನಡೆಯುತ್ತಿದ್ದು, ಹೆಣ್ಣು ಮಕ್ಕಳನ್ನು ಆಟಿಕೆಯ ಬೊಂಬೆಯಂತೆ ನೋಡುತ್ತಿರುವುದು ನಿಜಕ್ಕೂ ವಿಷಾದನೀಯ!! ಅದರಲ್ಲೂ ಕೂಡ ಇತ್ತೀಚಿನ ದಿನಗಳಲ್ಲಿ ಲವ್ ಜಿಹಾದ್ ಎಂಬ ಜಾಲದ ಸುಳಿಗೆ ಸಿಲುಕಿ ಮೃತ್ಯು ಕೂಪಕ್ಕೆ ಬೀಳುತ್ತಿರುವ ಹಿಂದೂ ಯುವತಿಯರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಲವ್ ಜಿಹಾದ್ ಎಗ್ಗಿಲ್ಲದೆ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಬೇಕಾಗಿದೆ.

 

ಇದೇ ರೀತಿಯ ಲವ್ ಪ್ರಕರಣವೊಂದು ಮುನ್ನಲೆಗೆ ಬಂದಿದ್ದು, ಮುಸ್ಲಿ ವಿವಾಹಿತನೋರ್ವ ಹಿಂದೂ ಧರ್ಮದ ಬಾಲಕಿಯ ಅಶ್ಲೀಲ ವೀಡಿಯೋ ಚಿತ್ರಿಸಿದ್ದು ಅಲ್ಲದೆ, ಈ ಬಳಿಕ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ವೆಸಗಿ ವಿಕೃತ ಮೆರೆದಿರುವ ಘಟನೆ ನಡೆದಿದೆ. ಅಷ್ಟೆ ಅಲ್ಲದೇ ತನ್ನ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗುವ ಆಸೆಯನ್ನು ತೋರಿದ್ದಾನೆ.

ಸಕ್ಕರೆ ನಾಡು ಮಂಡ್ಯದಲ್ಲಿ ಇತ್ತೀಚಿಗೆ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದೂವರೆ ತಿಂಗಳ ಹಿಂದೆಯಷ್ಟೇ ಮಳವಳ್ಳಿಯಲ್ಲಿ ಟ್ಯೂಷನ್ ಮಾಸ್ಟರ್ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಆ ಘಟನೆ ಯಿಂದ ಜನರು ಚೇತರಿಸಿಕೊಳ್ಳುವ ಮುನ್ನವೇ ಮುಸ್ಲಿಂ ವಿವಾಹಿತನೊಬ್ಬ ಹಿಂದೂ ಧರ್ಮದ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ, ತನ್ನ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗುವುದಾಗಿ ಆಸೆ ತೋರಿಸಿರುವ ಪ್ರಕರಣವೊಂದು ಮುನ್ನಲೆಗೆ ಬಂದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು 25 ವರ್ಷದ ಯೂನಸ್ ಫಾಷ್ ಎಂದು ಗುರುತಿಸಲಾಗಿದೆ. ಯುವತಿಯ ಎದುರು ಮನೆಯಲ್ಲೇ ವಾಸವಿದ್ದ ಬಾಲಕಿಯ ಸ್ನೇಹ ಸಂಪಾದಿಸಿದ್ದ ಯೂನಸ್ ಪಾಷ, ಹೆತ್ತವರಿಗೆ ತಿಳಿಯದಂತೆ ಮೊಬೈಲ್ ಕೊಡಿಸಿದ್ದ ಎನ್ನಲಾಗಿದೆ. ಆ ಬಳಿಕ ವೀಡಿಯೋ ಕಾಲ್‍ನಲ್ಲಿ ಬಾಲಕಿಯನ್ನು ಪುಸಲಾಯಿಸಿ ಬೆತ್ತಲೆ ವೀಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ಆ ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಅಪ್‍ಲೋಡ್ ಮಾಡುವ ಬೆದರಿಕೆಯೊಡ್ಡಿದ್ದಲ್ಲದೇ, ಮುಸ್ಲಿಂ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗುವ ಆಸೆಯನ್ನು ತೋರಿಸಿ ನವೆಂಬರ್ 11ರಂದು ಅತ್ಯಾಚಾರ ಮಾಡಿ ವಿಕೃತ ಮೆರೆದಿದ್ದಾನೆ.

ಬಾಲಕಿಯ ತಂದೆ ನವೆಂಬರ್ 8 ರಂದು ಶಿರಡಿಗೆ ಹೋಗಿದ್ದರು ಎನ್ನಲಾಗಿದ್ದು, ಈ ವೇಳೆ ತಾಯಿಯೊಂದಿಗೆ ಅಜ್ಜಿ ಮನೆಗೆ ಹೋಗಿದ್ದ ಬಾಲಕಿಗೆ ನಿದ್ರೆ ಮಾತ್ರೆಯನ್ನು ಪುಡಿ ಮಾಡಿ ರಾತ್ರಿ ಸಾಂಬಾರಿಗೆ ಹಾಕಿದ್ದ ಕಾಮುಕ ವ್ಯಾಘ್ರ ವ್ಯಕ್ತಿ ಯೂನಸ್, ನವೆಂಬರ್ 11ರ ರಾತ್ರಿ ಮನೆಯೊಳಗೆ ಬಂದು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಬಳಿಕ ಬಾಲಕಿಯ ನಡುವಳಿಕೆಯಲ್ಲಾದ ಬದಲಾವಣೆ ಗಮನಿಸಿದ ಪೋಷಕರು ಮಗಳ ಬಳಿ ವಿಚಾರಿಸಿದಾಗ ಅತ್ಯಾಚಾರ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಈ ಬಗ್ಗೆ 19ರಂದು ಬಾಲಕಿಯ ತಂದೆ ದೂರು ನೀಡಿದ್ದು, ಸದ್ಯ ಪೋಲೀಸರು ಯೂನಸ್ ಪಾಷನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಈ ನಡುವೆ ದಿನೇ ದಿನೇ ಅಪ್ರಾಪ್ತರ ಮೇಲಿನ ಕ್ರೌರ್ಯಗಳು ಹೆಚ್ಚಾಗುತ್ತಿದ್ದು, ಮುಗ್ದ ಬಾಲಕಿಯನ್ನು ಪುಸಲಾಯಿಸಿ ಬೆತ್ತಲೆ ವೀಡಿಯೋ ಮಾಡಿದ್ದಲ್ಲದೇ ಹೆದರಿಸಿ ಅತ್ಯಾಚಾರ ವೆಸಗಿರುವ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಲ್ಲಿನ ಪೋಷಕರಲ್ಲಿ ಆತಂಕ ಮನೆ ಮಾಡಿದೆ.

Leave A Reply

Your email address will not be published.