‘ಪಿಂಚಣಿ’ ದಾರರಿಗೊಂದು ಮಹತ್ವದ ಮಾಹಿತಿ
ಪಿಂಚಣಿದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜೀವನ ಪ್ರಮಾಣ ಪತ್ರವನ್ನು ಡಿಜಿಟಲ್ ಮಾಧ್ಯಮದ ಮೂಲಕ ಸಲ್ಲಿಸುವುದನ್ನು ಉತ್ತೇಜಿಸುವ ಸಲುವಾಗಿ ಭಾರತ ಸರ್ಕಾರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ ರಾಷ್ಟ್ರ ವ್ಯಾಪಿ ಅಭಿಯಾನವನ್ನು ಆರಂಭಿಸಿದೆ.
ಈ ಮೊದಲು ಜೀವನ ಪ್ರಮಾಣ ಪತ್ರವನ್ನು ಭೌತಿಕ ರೂಪದಲ್ಲಿ ಸಲ್ಲಿಸಬೇಕಾಗಿದ್ದು, ಇದು ವಯಸ್ಸಾದ ಪಿಂಚಣಿದಾರರಿಗೆ ಅನಾನುಕೂಲವಾಗಿತ್ತು. ಈ ಹಿನ್ನೆಲೆಯಲ್ಲಿ ಜೀವನ ಪ್ರಮಾಣ ಪತ್ರವನ್ನು ಡಿಜಿಟಲ್ ಮಾಧ್ಯಮದ ಮೂಲಕ ಸಲ್ಲಿಸಲು ಈಗ ಅವಕಾಶ ಕಲ್ಪಿಸಿಕೊಡಲಾಗಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ನವೆಂಬರ್ 24 ಮತ್ತು 25 ರಂದು ಬೆಂಗಳೂರಿನ ಕೆಜಿ ರಸ್ತೆಯಲ್ಲಿರುವ ಆಡಳಿತ ಕಚೇರಿ ಆವರಣದಲ್ಲಿ ಜಾಗೃತಿ ಅಭಿಯಾನ ನಡೆಸಲಿದ್ದು, ರಾಜ್ಯ ಸರ್ಕಾರದ ಪಿಂಚಣಿದಾರರೂ ಸೇರಿದಂತೆ ಎಲ್ಲಾ ಪಿಂಚಣಿದಾರರು ಡಿಜಿಟಲ್ ಮಾಧ್ಯಮದ ಮೂಲಕ ತಮ್ಮ ಜೀವನ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದಾಗಿದೆ.