ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಈ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿ ರೂ.11 ಸಾವಿರ ನಿಮ್ಮದಾಗಿಸಿಕೊಳ್ಳಿ!

ವಿದ್ಯಾರ್ಥಿಗಳ ಕಲಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೀನು ಕೃಷಿಕರ ಮಕ್ಕಳಿಗೆ 2022-23 ನೇ ಸಾಲಿನ ‘ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನ’ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಈ ಕೂಡಲೆ ಅರ್ಜಿ ಸಲ್ಲಿಸಿ ಅದರ ಸದುಪಯೋಗ ಪಡೆದುಕೊಳ್ಳಿ.

 

8 ರಿಂದ 10 ನೇ ತರಗತಿವರೆಗೆ ಓದುತ್ತಿರುವ ಹೆಣ್ಣು ಮಕ್ಕಳಿಗೆ ಮಾತ್ರ 2000 ರೂ., ಪಿಯುಸಿ, ಐಟಿಐ, ಡಿಪ್ಲೋಮಾ ಓದುತ್ತಿರುವ ಹೆಣ್ಣು ಮಕ್ಕಳಿಗೆ 3000 ರೂ. ಮತ್ತು ಗಂಡು ಮಕ್ಕಳಿಗೆ 2500 ರೂ., ಪದವಿ ಅಂದರೆ ಬಿ.ಎ, ಬಿ.ಎಸ್.ಸಿ., ಬಿಕಾಂ ಹಾಗೂ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಹೆಣ್ಣು ಮಕ್ಕಳಿಗೆ 5500 ರೂ. ಮತ್ತು ಗಂಡು ಮಕ್ಕಳಿಗೆ 5000 ರೂ.

ವೃತ್ತಿಪರ ಕೋರ್ಸ್‌ಗಳಾದ ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್, ಬಿ ಫಾರ್ಮ್, ನರ್ಸಿಗ್ ಓದುತ್ತಿರುವ ಗಂಡು ಮಕ್ಕಳಿಗೆ 7500 ರೂ. ಮತ್ತು ಹೆಣ್ಣು ಮಕ್ಕಳಿಗೆ 8000 ರೂ., ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‌ಗಳನ್ನು ಓದುವ ಗಂಡು ಮಕ್ಕಳಿಗೆ 10,000 ರೂ. ಮತ್ತು ಹೆಣ್ಣು ಮಕ್ಕಳಿಗೆ 11,000 ರೂ. ಶಿಷ್ಯವೇತನ ನೀಡಲಾಗುತ್ತದೆ.

ಶಿಷ್ಯ ವೇತನ ಅರ್ಜಿ ಸಲ್ಲಿಸಲು ಬಯಸುವ ಜಿಲ್ಲೆಯ ಎಲ್ಲಾ ಮೀನುಗಾರರು FRUITS ID ಸೃಜಿಸಲು ತಮ್ಮ ಆಧಾರ್ ಕಾರ್ಡ್ ಪ್ರತಿ, ಮೀನುಗಾರರ ಸಹಕಾರ ಸಂಘದ ಸದಸ್ಯತ್ವ ಪತ್ರ, ಬ್ಯಾಂಕ್ ಖಾತೆ ವಿವರ, ಮೊಬೈಲ್ ದೂರವಾಣಿ ಸಂಖ್ಯೆ ಹಾಗೂ ಮಕ್ಕಳ ಶಾಲಾ ವಿದ್ಯಾಭ್ಯಾಸದ ಐಡಿ ಕಾರ್ಡ್ ಪ್ರತಿಯೊಂದಿಗೆ ಸಂಬಂಧಿಸಿದ ತಾಲೂಕು ಮೀನುಗಾರಿಕಾ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ, ನವೆಂಬರ್ 30 ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Leave A Reply

Your email address will not be published.