ಸುಳ್ಯ : ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿ | ಶಂಕಿತ ಆರೋಪಿ ಇಮ್ರಾನ್ ನಾಪತ್ತೆ

ಸುಳ್ಯ : ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ನಡೆದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

 

ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ಹೇಳ ಲಾಗಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ.

ಇಂದು ಪಕ್ಕದ ರೂಂ ನವರಿಗೆ ಸಂಶಯ ಮೂಡಿತು. ಅವನು ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ. ಮೊನ್ನೆ ಮನೆಯಲ್ಲಿ ಕಿರುಚುವ ಶಬ್ದ ಕೇಳಿದೆ ಎಂದು ಅವರು ಸ್ನೇಹಿತರೊಬ್ಬರಿಗೆ ತಿಳಿಸಿದರು.
ಅವರು ಹೊಟೇಲ್ ಮಾಲೀಕರಿಗೆ ತಿಳಿಸಿ ಹೊಟೇಲ್ ಮಾಲಕರು ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಸಂಶಯಿತ ಆರೋಪಿ ಪರಾರಿಯಾಗಿದ್ದು, ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಫಿಂಗರ್ ಪ್ರಿಂಟ್ ತಜ್ಞರು ಮತ್ತು ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಬರಲಿದ್ದಾರೆಂದು ತಿಳಿದುಬಂದಿದೆ.

Leave A Reply

Your email address will not be published.