ಪದವೀದರ ಪ್ರಾಥಮಿಕ ಶಿಕ್ಷಕರ ನೇಮಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ: ದಿನಾಂಕ ಮುಂದೂಡಿಕೆ

ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆಪಟ್ಟಿಗೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ನ.30ರ ವರೆಗೆ ವಿಸ್ತರಿಸಲಾಗಿದೆ.

ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರದವರ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಖು¨ªಾಗಿ ಸಲ್ಲಿಸಲು ತಿಳಿಸಲಾಗಿದೆ. ಕೊನೆಯ ದಿನಾಂಕದ ನಂತರ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ದಿನಾಂಕ:18-11-2022 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ https://schooleducation.kar.nic.in ನಲ್ಲಿ 1:1 ತಾತ್ಕಾಲಿಕ ಆಯ್ಕೆಪಟ್ಟಿಗೆ ಪ್ರಕಟಿಸಲಾಗಿತ್ತು. ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಲು ನ.19ರಿಂದ 23ರ ವರೆಗೆ ಕಾಲಾವಕಾಶ ನೀಡಲಾಗಿತ್ತು.

Leave A Reply

Your email address will not be published.