ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟ್‌ ಆಟಗಾರ ಕೆ.ಎಲ್. ರಾಹುಲ್ !

ಸುಬ್ರಹ್ಮಣ್ಯ :  ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ತಂಡದ ಉಪನಾಯಕ ಮಂಗಳೂರು ಮೂಲಕ ಕೆ.ಎಲ್. ರಾಹುಲ್ ಇಂದು ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದರ್ಶನ ಪಡೆದರು

 

ಕೆ.ಎಲ್.ರಾಹುಲ್ ಪ್ರತಿವರ್ಷವೂ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ, ಪೂಜೆ ಸಲ್ಲಿಸುತ್ತಾರೆ. ಈ ಬಾರಿಯೂ ಆಗಮಿಸಿ ದೇವರಿಗೆ ಮಹಾಪೂಜೆ ನೆರವೇರಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.

ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ ಅವರು ವಿಶೇಷ ಸೇವೆ, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಇದೇ ವೇಳೆ ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಗೌರವಿಸಲಾಯಿತು

Leave A Reply

Your email address will not be published.