ವಾಹನ ಸವಾರರೇ ಗಮನಿಸಿ | ನಿಮ್ಮ ವಾಹನ 15 ವರ್ಷ ಹಳೆಯದಾಗಿದೆಯೇ ? ಹಾಗಾದರೆ ಈ ಮುಖ್ಯವಾದ ಮಾಹಿತಿ ನಿಮಗಾಗಿ!

ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಅಂದರೆ ಇಂದು ಮಹತ್ವದ ನಿರ್ಧಾರವೊಂದನ್ನು ಹೇಳಿದ್ದಾರೆ. ಅದೇನೆಂದರೆ, 15 ವರ್ಷ ಪೂರೈಸಿದ ಭಾರತ ಸರ್ಕಾರಕ್ಕೆ ಸೇರಿದ ಎಲ್ಲಾ ವಾಹನಗಳನ್ನು ಗುಜರಿ(ಸ್ಕ್ಯಾಪ್) ಹಾಕಲಾಗುವುದು ಮತ್ತು ಆ ನಿಟ್ಟಿನಲ್ಲಿ ಸ್ಕ್ಯಾಪ್ ನೀತಿಯನ್ನು ರಾಜ್ಯಗಳಿಗೂ ಕಳುಹಿಸಲಾಗಿದೆ ಎಂಬ ಹೇಳಿಕೆಯನ್ನು ಹೇಳಿದ್ದಾರೆ.

‘ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ 15 ವರ್ಷ ಪೂರೈಸಿರುವ ಕೇಂದ್ರ ಸರ್ಕಾರ ಎಲ್ಲ ವಾಹನಗಳನ್ನು ಸ್ಕ್ಯಾಪ್ ಮಾಡುವ ಕಡತಕ್ಕೆ ಸಹಿ ಮಾಡಿದ್ದೇನೆ. ಕೇಂದ್ರ ಸರ್ಕಾರ ಈ ನೀತಿಯನ್ನು ಎಲ್ಲ ರಾಜ್ಯಗಳಿಗೂ ಕಳುಹಿಸಿದ್ದೇನೆ. ಅವರು ಇದನ್ನು ಅಳವಡಿಸಿಕೊಳ್ಳಬೇಕು” ನಾಗಪುರದಲ್ಲಿ ವಾರ್ಷಿಕ ಕೃಷಿ-ವಿಷನ್, ಕೃಷಿ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುತ್ತಾ ಗಡ್ಕರಿ ಹೇಳಿದ್ದಾರೆ.

ಇದು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ದೇಶದ ಅಕ್ಕಿ ಉತ್ಪಾದಿಸುವ ಭಾಗಗಳಲ್ಲಿ ದೊಡ್ಡ ಬದಲಾವಣೆ ತರಲಿದೆ. ಭತ್ತದ ಹುಲ್ಲನ್ನು ಅಲ್ಲಿ ಸುಡುವುದರಿಂದ ಮಾಲಿನ್ಯವಾಗುತ್ತದೆ. ಹಾಗಾಗಿ ಎಥೆನಾಲ್ ಮತ್ತು ಜೈವಿಕ ಬಿಟುಮೆನ್ ಉತ್ಪಾದಿಸಲು ಅಕ್ಕಿ ಹುಲ್ಲು ಬಳಸವುದರಿಂದ ವಾಯು ಮಾಲಿನ್ಯ ತಡೆಯಬಹುದು” ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಅಷ್ಟು ಮಾತ್ರವಲ್ಲದೇ, ಪಾಣಿಪತ್‌ನಲ್ಲಿ ಇಂಡಿಯನ್ ಆಯಿಲ್‌ನ ಎರಡು ಸ್ಥಾವರಗಳು ಬಹುತೇಕ ಪ್ರಾರಂಭವಾಗಿದ್ದು, ಅದರಲ್ಲಿ ಒಂದು ದಿನಕ್ಕೆ ಒಂದು ಲಕ್ಷ ಲೀಟರ್ ಎಥೆನಾಲ್‌ ಅನ್ನು ಉತ್ಪಾದಿಸುತ್ತದೆ ಮತ್ತು ಇನ್ನೊಂದು ದಿನಕ್ಕೆ 150 ಟನ್ ಬಯೋ-ಬಿಟುಮೆನ್ ಅನ್ನು ಭತ್ತದ ಹುಲ್ಲು ಬಳಸಿ ತಯಾರಿಸುತ್ತದೆ ಎಂದು ತಿಳಿಸಿದರು.

Leave A Reply

Your email address will not be published.