ರಾಜ್ಯದ ಸರಕಾರಿ ಶಾಲಾ‌ ಮಕ್ಕಳಿಗೆ ಹೆಲ್ತ್ ಕಾರ್ಡ್ | ಬನ್ನಿ ಇದರ ಪ್ರಯೋಜನ ತಿಳಿಯೋಣ!

ರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಶಿಕ್ಷಣ , ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಹೀಗೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದೆ. ಇದರ ನಡುವೆ ಸರ್ಕಾರ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಿಹಿ ಸುದ್ಧಿ ನೀಡಲು ಮುಂದಾಗಿದೆ.

ಹೌದು!!ರಾಜ್ಯ ಸರ್ಕಾರ ಶೀಘ್ರದಲ್ಲೇ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ಧಿ ನೀಡಲು ಅಣಿಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ಮಕ್ಕಳಿಗೆ ಆರೋಗ್ಯ ಕಾರ್ಡ್‌ ವಿತರಣೆ ಮಾಡಲು ಸರ್ಕಾರ ಮುಂದಾಗಿದೆ.

ರಾಜ್ಯದ 48 ಸಾವಿರ ಶಾಲೆಗಳ ಮಕ್ಕಳ ಸಮಗ್ರ ಆರೋಗ್ಯ ತಪಾಸಣೆ ನಡೆಸಲು ಒಂದೇ ಇಲಾಖೆಗೆ ಹೊರೆ ಯಾಗುವುದರಿಂದ ,ಹೀಗಾಗಿ ಸರ್ಕಾರಿ, ಖಾಸಗಿ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳ ಸಹಭಾಗಿತ್ವದಲ್ಲಿ ಆರೋಗ್ಯ ತಪಾಸಣೆ ಕಾರ್ಯ ನಿರ್ವಹಿಸಲು ಕೋರಲಾಗಿದೆ.

ಆರೋಗ್ಯ ತಪಾಸಣೆಗೆ ದೃಷ್ಟಿ ದೋಷ, ಹಲ್ಲು ನೋವು ಮುಂತಾದ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ತಿಳಿಸಲಾಗಿದೆ.
ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳ ಆರೋಗ್ಯವನ್ನು ಸಮಗ್ರವಾಗಿ ತಪಾಸಣೆ ನಡೆಸಿ ವಾರ್ಷಿಕ ಅಂಕಪಟ್ಟಿ ಜತೆಗೆ ಡಿಜಿಟಲ್ ಆರೋಗ್ಯ (ಹೆಲ್ತ್) ಕಾರ್ಡ್‌ ನೀಡಲು ಸರ್ಕಾರ ನಿರ್ಧರಿಸಿದೆ.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿರುವ ಕುರಿತು ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ. ಎಂ.ಆರ್. ದೊರೆಸ್ವಾಮಿ ಮಾಹಿತಿ ನೀಡಿದ್ದಾರೆ. ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ, ಅವರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾದ ಅವಶ್ಯಕತೆ ಇದ್ದು, ಈ ಹಿನ್ನಲೆಯಲ್ಲಿ ವಿಸ್ತೃತ ಪ್ರಸ್ತಾವನೆ ಸಲ್ಲಿಸಿ, ಆರೋಗ್ಯ ಸಚಿವರ ಸಮ್ಮುಖದಲ್ಲಿ ಚರ್ಚೆ ನಡೆಸಿ ಸಂಬಂಧಿತ ಅಧಿಕಾರಿಗಳಿಗೆ ಸಚಿವರು ಪತ್ರ ಬರೆಯಲಾಗಿದೆ.


ಪ್ರತಿ ಮಗುವಿನ ವಾರ್ಷಿಕ ಆರೋಗ್ಯ ತಪಾಸಣೆ ಡೈರಿಯನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ, ಪರೀಕ್ಷಾ ಫಲಿತಾಂಶ ಅಂಕಪಟ್ಟಿ ನೀಡುವ ಸಂದರ್ಭದಲ್ಲಿ ಡಿಜಿಟಲ್ ಹೆಲ್ತ್ ಕಾರ್ಡ್ ವಿತರಿಸಿದರೆ, ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ಪಾಲಕರಿಗೂ ಕೂಡ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ.

ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ದೈನಂದಿನ ಬೋಧನೆ ಜತೆಗೆ ಹೆಚ್ಚುವರಿ ಮಾರ್ಗದರ್ಶಿತ್ವಕ್ಕಾಗಿ ಪ್ರತಿಯೊಬ್ಬ ಉಪನ್ಯಾಸಕರಿಗೆ 25 ವಿದ್ಯಾರ್ಥಿಗಳ ಗುಂಪಿನ ಹೊಣೆ ಒಪ್ಪಿಸುವ ಜೊತೆಗೆ , ಈ ಗುಂಪಿನ ಒಟ್ಟಿಗೆ ತಿಂಗಳಿಗೊಮ್ಮೆ ಉಪನ್ಯಾಸಕರು ಖುದ್ದು ಇದರ ಬಗ್ಗೆ ಚರ್ಚೆ ನಡೆಸಿ, ಹಿನ್ನಡೆಯನ್ನು ಅರಿತು ಪರಿಹಾರ ಕ್ರಮ ಒದಗಿಸುವುದು ಇದರ ಉದ್ದೇಶವಾಗಿದೆ.


ಇದರ ಜತೆಗೆ ಯೋಗ, ನೈತಿಕ ಹಾಗೂ ಮೌಲ್ಯ ಶಿಕ್ಷಣ ನೀಡುವ ಜೊತೆಗೆ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಕೂಡ ಆದೇಶ ನೀಡಲಾಗಿದ್ದು, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕೂಡ ಈ ಯೋಜನೆಗೆ ಸಮ್ಮತಿಸಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.