ರಾಜ್ಯ ಸರಕಾರಿ ನೌಕರರಿಗೆ ಮತ್ತು ಅವರ ಕುಟುಂಬದವರಿಗೆ ಗುಡ್ ನ್ಯೂಸ್ | ಹೊಸ ವರ್ಷದಿಂದ ಲಭ್ಯವಾಗಲಿದೆ ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಸೇವೆ!

ರಾಜ್ಯ ಸರಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ರಾಜ್ಯದ ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಸೇವೆ ಲಭ್ಯವಾಗಲಿದೆ.

ಈ ಯೋಜನೆ ಹೊಸ ವರ್ಷದಿಂದ ಜಾರಿಗೆ ಬರಲಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಹೇಳಿದ್ದಾರೆ. ಈ ಮೂಲಕ ರಾಜ್ಯ ಸರಕಾರದ 5.50 ಲಕ್ಷ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದುರಹಿತ ಚಿಕಿತ್ಸಾ ವ್ಯವಸ್ಥೆ ಜನವರಿಯಲ್ಲಿ ಜಾರಿಯಾಗಲಿದೆ.

ಮಾರಣಾಂತಿಕ ಕಾಯಿಲೆಗಳೂ ಸೇರಿದಂತೆ 1,226 ಆರೋಗ್ಯ ಸಮಸ್ಯೆಗಳಿಗೆ ಮಲ್ಪಿ ಸ್ಪೆಷ್ಟಾಲಿಟಿ ಆಸ್ಪತ್ರೆ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿಶಸ್ತ್ರಚಿಕಿತ್ಸೆ ಒಳಗೊಂಡಂತೆ ಸಂಪೂರ್ಣ ನಗದುರಹಿತ ಚಿಕಿತ್ಸೆ ಸಿಗುವ ‘ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಚಿತ ಆರೋಗ್ಯ ಯೋಜನೆ’ಗೆ ರಾಜ್ಯ ಸರಕಾರ ಅಂಗೀಕಾರ ನೀಡಿದೆ. ಅನಿರೀಕ್ಷಿತವಾಗಿ ಕೋವಿಡ್‌ ವೈರಾಣು ಕಾಣಿಸಿಕೊಂಡು ಸಾಕಷ್ಟು ಸಾವುನೋವು ಸಂಭವಿಸಿದ್ದರಿಂದ ಮುಂದೆ ಕಾಣಿಸಿಕೊಳ್ಳಬಹುದಾದ ಹೊಸ ಕಾಯಿಲೆಗಳು ಸೇರಿದಂತೆ 1226 ಬಗೆಯ ಕಾಯಿಲೆಗಳಿಗೆ ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸೆ ಪಡೆಯಬಹುದಾಗಿದೆ.

4.50 ಲಕ್ಷ ನಿವೃತ್ತ ನೌಕರರಿದ್ದು, ಅವರಿಗೂ ಆಯ್ದ ಆರೋಗ್ಯ ಸಮಸ್ಯೆಗಳಿಗೆ ನಗದುರಹಿತ ಚಿಕಿತ್ಸೆ ಕಲ್ಪಿಸಲು ಪ್ರಯತ್ನಿಸಲಾಗುವುದು. ನಿವೃತ್ತ ನೌಕರರಿಗೆ ಪಿಂಚಣಿ ಪಾವತಿಯಾಗುವ ಬ್ಯಾಂಕ್‌ ಖಾತೆಯಿಂದಲೇ ಶುಲ್ಕ ಕಡಿತ ಮಾಡಿಕೊಂಡು ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ಈ ಮೂಲಕ ಸರಕಾರಿ ನೌಕರರ ವರ್ಗಕ್ಕೆ ಗುಣಮಟ್ಟದ ಆರೋಗ್ಯ ಸೇವೆ ಮೂಲಕ ಹೆಚ್ಚಿನ ಭದ್ರತೆ ಸಿಗಲಿದೆ.

Leave A Reply

Your email address will not be published.