ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯತ್ತ ಸರ್ಕಾರದ ಚಿತ್ತ | ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ರೂ.10.00 ಕೋಟಿ ಅನುದಾನ – ಹರೀಶ್ ಪೂಂಜಾ

ಬೆಳ್ತಂಗಡಿ ತಾಲೂಕಿನ ಸುಮಾರು 28 ದೇವಸ್ಥಾನಗಳಿಗೆ ಬರೋಬ್ಬರಿ ರೂ.10.00 ಕೋಟಿ ಅನುದಾನವನ್ನು ಸರ್ಕಾರವು ಮಂಜೂರು ಮಾಡಿದೆ.


Ad Widget

Ad Widget

Ad Widget

Ad Widget
Ad Widget

Ad Widget

Ad Widget

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸುಮಾರು 28 ದೇವಾಲಯಗಳಿಗೆ ಮೂಲಭೂತ ಸೌಕರ್ಯವನ್ನು ವೃದ್ಧಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಬರೋಬ್ಬರಿ 10.00 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಿದೆ.

ಈ ಬಗ್ಗೆ ಶಾಸಕ ಹರೀಶ್ ಪೂಂಜ ಅವರು, ಬೆಳ್ತಂಗಡಿ ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆಂದು ಅಗಾಧವಾದ ಅನುದಾನವನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು, ಧಾರ್ಮಿಕ ದತ್ತಿ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆಯವರು, ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್‍ರವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ರವರಿಗೆ ತಾಲೂಕಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನೂ ಅನುದಾನ ಮಂಜೂರಾದ ದೇವಾಲಯಗಳು ಯಾವುದೆಂದರೆ, ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ, ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ, ಕೊರಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಉರುವಾಲು, ಶ್ರೀ ಗೋಪಾಕೃಷ್ಣ ದೇವಸ್ಥಾನ ನಾವೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು, ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಕಲ್ಮಂಜ, ಶ್ರೀ ಸೂರ್ಯನಾರಾಯಣ ದೇವಸ್ಥಾನ ಹೊಸಂಗಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಹತ್ಯಡ್ಕ ಈ ಮೇಲಿನ ದೇವಾಲಯಗಳ ಅಭಿವೃದ್ಧಿ ಕಾರ್ಯಗಳಿಗೆ ತಲಾ ರೂ.50.00 ಲಕ್ಷ ಮಂಜೂರಾಗಿದೆ.

ಹಾಗೂ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ, ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು, ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟು, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಬಂದಾರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕರಾಯ, ಶ್ರೀ ಮಹಿಷಮರ್ದಿನಿ ದೇವಸ್ಥಾನ ಪಾರೆಂಕಿ, ಶ್ರೀ ಮಹಾಗಣಪತಿ ದೇವಸ್ಥಾನ ಬಡಗಕಾರಂದೂರು, ಪೆರ್ಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಉಜಿರೆ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕೊಯ್ಯೂರು, ಸನ್ಯಾಸಿಕಟ್ಟೆ ಶ್ರೀ ಪರುಶುರಾಮ ದೇವಸ್ಥಾನ ಮುಂಡಾಜೆ, ಕುರಾಯ ಶ್ರೀ ಸದಾಶಿವೇಶ್ವರ ದೇವಸ್ಥಾನ ಬಂದಾರು, ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬಂದಾರು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳದಪೇಟೆ ಕಾಶಿಪಟ್ನ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಮರೋಡಿ, ಶ್ರೀ ಸದಾಶಿವ ದೇವಸ್ಥಾನ ಕಳೆಂಜ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಮೂಡುಕೋಡಿ ಈ ಮೇಲಿನ ದೇವಾಲಯಗಳ ಅಭಿವೃದ್ಧಿ ಕಾರ್ಯಕ್ಕೆ ತಲಾ ರೂ.25.00 ಲಕ್ಷ ಅನುದಾನ ಮಂಜೂರಾಗಿದೆ ಎಂಬುದು ಶಾಸಕರ ಪತ್ರಿಕಾ ಪ್ರಕಟಣೆಯಲ್ಲಿ ಪ್ರಕಟವಾಗಿದೆ.

error: Content is protected !!
Scroll to Top
%d bloggers like this: