ಜಿಯೋದಿಂದ ವೆಲ್‌ಕಮ್‌ ಆಫರ್‌ | ಉಚಿತ 5ಜಿ ಕನೆಕ್ಷನ್‌ ಪಡೆಯಲು ಈ ರೀತಿ ಮಾಡಿ

ಜಿಯೋ ಚಂದಾದಾರರು ಇಲ್ಲಿ ಸ್ವಲ್ಪ ಗಮನಿಸಿ. ನೀವು ನಿಮ್ಮ ಆಯ್ಕೆಯಾದ ಜಿಯೋ ಸಿಮ್ ನಲ್ಲಿ ಏನೆಲ್ಲಾ ವ್ಯತ್ಯಾಸ ಆಗುತ್ತಿವೆ ಎಂದು ತಿಳಿದುಕೊಳ್ಳಲೇ ಬೇಕು.
ಈಗಾಗಲೇ ಭಾರತದ ಹಲವು ನಗರಗಳಲ್ಲಿ 5G ಸೇವೆ ಆರಂಭಗೊಂಡಿದೆ. ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ಜಿಯೋ ಇದೀಗ 5ಜಿ ಸೇವೆಯನ್ನು ಭಾರತದ ಮೂಲೆ ಮೂಲೆಗೆ ವಿಸ್ತರಿಸಲಾಗಿದೆ.
ಜಿಯೋ ಟ್ರೂ 5Gಯು ಈ ಎರಡೂ ತಂತ್ರಜ್ಞಾನ ಕೇಂದ್ರಿತ ನಗರಗಳಲ್ಲಿ ಮಾನವೀಯತೆಗೆ ಸೇವೆ ಸಲ್ಲಿಸುವ ಮತ್ತು ಭಾರತೀಯರ ಜೀವನದ ಗುಣಮಟ್ಟ ಸುಧಾರಿಸುವ ಕೆಲವು ಇತ್ತೀಚಿನ ತಂತ್ರಜ್ಞಾನಗಳ ನಿಜವಾದ ಸಾಮರ್ಥ್ಯವನ್ನು ಅರಿಯುವುದಕ್ಕೆ ಸಹಾಯ ಮಾಡುತ್ತದೆ.

 

ಅತ್ಯುತ್ತಮ ಗ್ರಾಹಕ ಅನುಭವ ಖಚಿತ ಮಾಡಿಕೊಳ್ಳಲು ಜಿಯೋದಿಂದ ಸುಧಾರಿತ ಟ್ರೂ 5G ಸೇವೆಗಳನ್ನು ಹಂತ-ಹಂತವಾಗಿ ಹೊರತರುತ್ತಿದೆ. ಜಿಯೋ ಟ್ರೂ 5G ಅನುಭವವನ್ನು ಈಗಾಗಲೇ ಆರು ನಗರಗಳಲ್ಲಿ ಲಕ್ಷಗಟ್ಟಲೆ ಬಳಕೆದಾರರು ಪಡೆಯುತ್ತಿದ್ದಾರೆ. ಇದಕ್ಕೆ ದೊರೆಯುತ್ತಿರುವ ಪ್ರತಿಕ್ರಿಯೆ ಅತ್ಯಂತ ಧನಾತ್ಮಕವಾಗಿದೆ ಮತ್ತು ಭರವಸೆ ನೀಡುತ್ತದೆ. ಜಿಯೋ ಜಾಗತಿಕವಾಗಿ ಅತ್ಯಾಧುನಿಕ 5G ನೆಟ್‌ವರ್ಕ್ ಅನ್ನು ರೂಪಿಸುವುದಕ್ಕೆ ಗ್ರಾಹಕರ ಒಳನೋಟಗಳು ಮತ್ತು ಪ್ರತಿಕ್ರಿಯೆಯು ಸಹಾಯ ಮಾಡುತ್ತಿದೆ.

ಇದೀಗ ಜಿಯೋ ಟ್ರೂ 5G ಅನ್ನು ಉಚಿತವಾಗಿ ಸಂಪರ್ಕಿಸಲು ಮತ್ತು ಆನಂದಿಸಲು ಗ್ರಾಹಕರಿಗೆ ವೆಲ್‌ಕಮ್ ಆಫರ್ ಅನ್ನು ಘೋಷಿಸಿದೆ. ಆದರೆ, ಈ ವೆಲ್‌ಕಮ್‌ ಆಫರ್ ಆಯ್ದ ಜಿಯೋ 5G ಬಳಕೆದಾರರಿಗೆ ಮಾತ್ರವಷ್ಟೆ ಲಭ್ಯವಾಗುತ್ತಿದೆ.

ಜಿಯೋ 5ಗ್ ಸೌಲಭ್ಯವನ್ನು ಪಡೆಯಲು ಜಿಯೋ ಗ್ರಾಹಕರು ಕೆಲ ಅರ್ಹತೆಯನ್ನು ಪಡೆದುಕೊಂಡಿರಬೇಕು ಎಂದು ರಿಲಯನ್ಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಯೋ ಹೇಳಿರುವ ಪ್ರಕಾರ:

  • ಬಳಕೆದಾರರು ಜಿಯೋ 5G ನೆಟ್‌ವರ್ಕ್ ಪಡೆಯಲು ಮೊದಲು 5ಜಿ ಬೆಂಬಲ ಪಡೆದುಕೊಂಡಿರುವ ಸ್ಮಾರ್ಟ್‌ಫೋನ್ ಅನ್ನು ಹೊಂದಿರಬೇಕು.
  • ನಂತರ ನೀವಿರುವ ಜಾಗದಲ್ಲಿ ಜಿಯೋ 5G ನೆಟ್‌ವರ್ಕ್ ಕವರೇಜ್ ಲಭ್ಯವಿರಬೇಕು.
  • ಜಿಯೋ ಪ್ರಿಪೇಯ್ಡ್ ಅಥವಾ ಪೋಸ್ಟ್‌ಪೇಯ್ಡ್ ಬಳಕೆದಾರರಲ್ಲಿ ಕನಿಷ್ಠ 239 ರೂ. ಅಥವಾ ಅದಕ್ಕಿಂತ ಹೆಚ್ಚಿನ ಬೆಲೆಯ ಪ್ಲಾನ್​ಗಳು ಆ್ಯಕ್ಟಿವ್ ಆಗಿರಬೇಕು ಎಂದು ಹೇಳಿದೆ.

ಜಿಯೋ 5G ವೆಲ್‌ಕಮ್‌ ಆಫರ್ ಸದ್ಯ ದೆಹಲಿ – NCR, ಮುಂಬೈ, ಬೆಂಗಳೂರು, ಹೈದರಾಬಾದ್ ಮತ್ತು ಇತರ 5 ನಗರಗಳು ಸೇರಿದಂತೆ ಅರ್ಹ ನಗರಗಳಲ್ಲಿ ಮಾತ್ರ ಲಭ್ಯವಿದೆ. ಅಂದಹಾಗೆ ಈ 5G ಕೊಡುಗೆಯಲ್ಲಿ ಜಿಯೋ ತನ್ನ ಗ್ರಾಹಕರಿಗೆ 1gbps ವೇಗದೊಂದಿಗೆ ಅನಿಯಮಿತ 5G ಡೇಟಾವನ್ನು ಒದಗಿಸುತ್ತಿದೆ.

ಸದ್ಯ ಬಳಕೆಯಲ್ಲಿರುವ ಜಿಯೋ 4G ಸಿಮ್, ನೂತನ 5G ಸಂಪರ್ಕವನ್ನು ನೀಡಲಿದೆ. ಜಿಯೋ ಮೈ ಜಿಯೋ ಅಪ್ಲಿಕೇಶನ್‌ನಲ್ಲಿ ವೆಲ್‌ಕಮ್‌ ಆಫರ್‌ನ ಅವಕಾಶ ಕಳುಹಿಸುತ್ತದೆ. ನೀವು ಪ್ರಸ್ತುತ ಜಿಯೋ 5G ಸಪೋರ್ಟ್‌ ಇರುವ ನಗರಗಳಲ್ಲಿ ಇದ್ದರೆ, ಮೈ ಜಿಯೋ ಅಪ್ಲಿಕೇಶನ್‌ನಲ್ಲಿ ವೆಲ್‌ಕಮ್‌ ಆಫರ್ ಪಡೆಯಬಹುದಾಗಿದೆ. ಅದಲ್ಲದೆ ಅತ್ಯುತ್ತಮ ಗ್ರಾಹಕ ಅನುಭವ ಖಚಿತ ಮಾಡಿಕೊಳ್ಳಲು ಜಿಯೋದ ದೊಡ್ಡ ಪ್ರಯತ್ನ ಆಗಿದೆ.

Leave A Reply

Your email address will not be published.