ನೀವು ಪದವಿ ಪಾಸಾಗಿದ್ರೆ ಆಧಾರ್ ಕಾರ್ಡ್ ಹುದ್ದೆಗೆ ಈಗಲೇ ಅರ್ಜಿ ಸಲ್ಲಿಸಿ |

Share the Article

UIDAI Recruitment 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿ ಕೆಳಗೆ ನೀಡಲಾಗಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಜನವರಿ 08, 2023ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :
ಡೆಪ್ಯುಟಿ ಡೈರೆಕ್ಟರ್ -2
ಟೆಕ್ನಿಕಲ್ ಆಫೀಸರ್- 3
ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್- 5

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 08/01/2023

ವಿದ್ಯಾರ್ಹತೆ :  ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್/ ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ :  ಅಭ್ಯರ್ಥಿಗಳ ಗರಿಷ್ಠ ವಯಸ್ಸು ಜನವರಿ 8, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ :  ಲಿಖಿತ ಪರೀಕ್ಷೆ ಸಂದರ್ಶನ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.

ನಿರ್ದೇಶಕರು (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಆಧಾರ್ ಕಾಂಪ್ಲೆಕ್ಸ್, NTI ಲೇಔಟ್,ಟಾಟಾ ನಗರ, ಕೊಡಿಗೇಹಳ್ಳಿ ಟೆಕ್ನಾಲಜಿ ಸೆಂಟರ್ ಬೆಂಗಳೂರು- 560092

Leave A Reply